ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಜೇಸಿಐ ರಜತ ವರ್ಷಾಚರಣೆಯ ಸಮಾರೋಪ ; ಸನ್ಮಾನ ; ಸಾಂಸ್ಕೃತಿಕ ಕಾರ್ಯಕ್ರಮ

Posted On: 29-01-2023 10:06PM

ಕಾಪು : ಜಗತ್ತಿನ ಎಲ್ಲೆಡೆ ಕಾಡುತ್ತಿರುವ ಅಶಾಂತಿಯ ವಾತಾವರಣವನ್ನು ತೊಲಗಿಸುವಲ್ಲಿ ಜೇಸಿಐನಂತಹ ಅಂತಾರಾಷ್ಟ್ರೀಯ ಸಂಸ್ಥೆಗಳ ಮಾರ್ಗದರ್ಶನ ಅತೀ ಅಗತ್ಯವಾಗಿದ್ದು, ಜಾಗತಿಕ ಶಾಂತಿ ಮತ್ತು ಜಗತ್ತಿನ ಕಲ್ಯಾಣಕ್ಕಾಗಿ ಜೇಸಿಐ ಸಂಸ್ಥೆ ವಿಶೇಷ ಕೊಡುಗೆ ನೀಡುವಂತಾಗಲಿ ಎಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು. ಅವರು ಜನವರಿ 28 ರಂದು ಕಾಪು ಪೇಟೆಯಲ್ಲಿ ಆಯೋಜಿಸಲಾಗಿದ್ದ ಕಾಪು ಜೇಸಿಐನ ರಜತ ವರ್ಷಾಚರಣೆಯ ಸಮಾರೋಪ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ರಜತ ಸಂಭ್ರಮ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗುರ್ಮೆ ಫೌಂಡೇಷನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ ಮಾತನಾಡಿ, ಕಾಪು ಜೇಸಿಐ ಸಮಾಜಕ್ಕೆ ಉತ್ತಮ ನಾಯಕರನ್ನು, ತರಬೇತಿದಾರರನ್ನು, ಮಾರ್ಗದರ್ಶಕರನ್ನು ನೀಡುತ್ತಾ ಬಂದಿರುವ ಸಂಸ್ಥೆಯಾಗಿದೆ. ಇಪ್ಪತ್ತೈದು ವರ್ಷಗಳನ್ನು ತಪಸ್ಸಿನಂತೆ ಪೂರೈಸಿರುವ ಸಂಸ್ಥೆಯ ಆಶಯ ಮತ್ತು ಆಶೋತ್ತರಗಳನ್ನು ಈಡೇರಿಕೆಗೆ ಎಲ್ಲರ ಸಹಕಾರದ ಅಗತ್ಯತೆಯಿದೆ ಎಂದರು. ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಉಡುಪಿ ಜಿಲ್ಲೆ ಮತ್ತು ಕಾಪು ಜೇಸಿಐ ಸಂಸ್ಥೆಯು ಜತೆ ಜತೆಗೆ ರಜತ ವರ್ಷವನ್ನು ಪೂರೈಸುತ್ತಿದ್ದು ಎಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಜೇಸಿಐನ ಮೂಲಕವಾಗಿ ವ್ಯಕ್ತಿತ್ವದ ನಿರ್ಮಾಣವಾಗುತ್ತಿದ್ದು ಈ ಮಾದರಿಯ ತರಬೇತಿ, ಮಾರ್ಗದರ್ಶನಗಳು ಸಮಾಜದ ಯುವಜನರಿಗೆ ನಿರಂತರವಾಗಿ ದೊರಕುವಂತಾಗಲಿ ಎಂದು ಶುಭ ಹಾರೈಸಿದರು.

ರಜತ ವರ್ಷಾಚರಣೆ ಸಮಿತಿ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಶುಭಾಶಂಸನೆಗೈದರು. ಜೇಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ, ಕೆ.ಎಂ.ಎಫ್ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಜೇಸಿಐ ಆಡಳಿತ ನಿರ್ವಹಣಾ ಸಮಿತಿ ಸದಸ್ಯ ವೈ. ಸುಕುಮಾರ್, ಉದ್ಯಮಿ ಪ್ರಭಾಕರ ಪೂಜಾರಿ, ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು, ಜೇಸಿಐ ಕಟಪಾಡಿ ಅಧ್ಯಕ್ಷೆ ಜ್ಯೋತಿ ಶಂಕರ್ ಸಾಲ್ಯಾನ್, ಜೇಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷೆ ಮಾಲಿನಿ ಶೆಟ್ಟಿ, ನಟಿ ನವ್ಯಾ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭ ಕಳೆದ ಇಪ್ಪತ್ತೈದು ವರ್ಷಗಳಲ್ಲಿ ಕಾಪು ಜೇಸಿಐನ ವಿವಿಧ ಕಾರ್ಯಕ್ರಮಗಳಿಗೆ ಸಹಕರಿಸಿದ ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನು ಹಾಗೂ ಕಾಪು ಜೇಸಿಐನ ನಿಕಟ ಪೂರ್ವಾಧ್ಯಕ್ಷ ಸುಜಿತ್ ಶೆಟ್ಟಿ, ವೈ. ಜಯಕರ್ ಎರ್ಮಾಳು ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು. ಸಂಸ್ಥೆಯನ್ನು ಮುನ್ನಡೆಸಿದ ಪೂರ್ವಾಧ್ಯಕ್ಷರುಗಳನ್ನು ಗೌರವಿಸಲಾಯಿತು. ಸಮಿತಿ ಕೋಶಾಧಿಕಾರಿ ಸೌಮ್ಯ ರಾಕೇಶ್, ಕಾರ್ಯಕ್ರಮ ನಿರ್ದೇಶಕ ರಮೇಶ್ ನಾಯ್‌ಕ, ಜೇಸಿಐ ಕಾರ್ಯದರ್ಶಿ ಪ್ರಸಾದ್ ಆಚಾರ್ಯ ಉಪಸ್ಥಿತರಿದ್ದರು.

ರಜತ ವರ್ಷಾಚರಣೆ ಸಮಿತಿ ಕಾರ್ಯದರ್ಶಿ ಎಂ. ನೀಲಾನಂದ ನಾಯ್ಕ್ ಸ್ವಾಗತಿಸಿದರು. ಕಾಪು ಜೇಸಿಐ ಅಧ್ಯಕ್ಷೆ ದೀಕ್ಷಾ ಆರ್. ಕೋಟ್ಯಾನ್ ಸಮ್ಮಾನಿತರನ್ನು ಪರಿಚಯಿಸಿದರು. ಪೂರ್ವಾಧ್ಯಕ್ಷ ಶಿವಣ್ಣ ಬಾಯಾರ್ ಕಾರ್ಯಕ್ರಮ ನಿರೂಪಿಸಿದರು. ನಿಕಟ ಪೂರ್ವಾಧ್ಯಕ್ಷ ಸುಜಿತ್ ಶೆಟ್ಟಿ ವಂದಿಸಿದರು.