ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಜೇಸಿಐ - ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಗೌರವ ಪುರಸ್ಕೃತರಾದ ಎಎಸ್ಐ ಗೋಪಾಲ್ ಶೆಟ್ಟಿಗಾರ್

Posted On: 31-01-2023 10:43PM

ಕಾಪು : ಪೊಲೀಸ್ ಇಲಾಖೆಯ ಟ್ರಾಫಿಕ್ ನಿರ್ವಹಣೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜನಮೆಚ್ಚುಗೆ ಗಳಿಸಿರುವ ಪ್ರಸ್ತುತ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಉಪನಿರೀಕ್ಷಕ ಗೋಪಾಲ್ ಶೆಟ್ಟಿಗಾರ್ ಅವರನ್ನು ಕಾಪು ಜೇಸಿಐನ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಕಾರ್ಯಕ್ರಮದಡಿಯಲ್ಲಿ ಸಮ್ಮಾನಿಸಿ ಗೌರವಿಸಲಾಯಿತು.

ಕಾಪು ಜೇಸಿಐನ ಅಧ್ಯಕ್ಷೆ ದೀಕ್ಷಾ ಆರ್. ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೂರ್ವ ವಲಯಾಧ್ಯಕ್ಷ, ಪತ್ರಕರ್ತ ರಾಕೇಶ್ ಕುಂಜೂರು ಅಭಿನಂದನಾ ಭಾಷಣ ಮಾಡಿದರು. ಪೂರ್ವಾಧ್ಯಕ್ಷ ರಾಜೇಂದ್ರ ಬಿ.ಕೆ. ಸಮ್ಮಾನ ಪತ್ರ ವಾಚಿಸಿದರು. ಕಾಪು ಪೊಲೀಸ್ ಠಾಣೆಯ ಎಎಸ್‌ಐ ರಾಜೇಂದ್ರ ಮಣಿಯಾಣಿ, ಠಾಣಾ ಮೇಲ್ವಿಚಾರಕ ರವೀಂದ್ರ, ಕಾಪು ಜೇಸಿಐನ ಪೂರ್ವಾಧ್ಯಕ್ಷರಾದ ರಮೇಶ್ ನಾಯ್ಕ್, ವಿನೋದ್ ಕಾಂಚನ್, ಅರುಣಾ ಐತಾಳ್, ಕಾರ್ಯದರ್ಶಿ ಪ್ರಸಾದ್ ಆಚಾರ್ಯ, ಕೋಶಾಽಕಾರಿ ಸಂತೋಷ್ ಉಳಿಯಾರು, ಪದಾಧಿಕಾರಿಗಳಾದ ಶ್ರುತಿ ಶೆಟ್ಟಿ, ವಿಕ್ಕಿ ಪೂಜಾರಿ, ಪ್ರಕಾಶ್ ಆಚಾರ್ಯ ಹಾಗೂ ಪೊಲೀಸ್ ಠಾಣೆಯ ಸಿಬಂದಿಗಳು ಉಪಸ್ಥಿತರಿದ್ದರು.