ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಫೆಬ್ರವರಿ 3 : ಕಾಪು ಗದ್ದಿಗೆ ಬೆಟ್ಟು ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ : ನೂತನ ಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ

Posted On: 01-02-2023 11:39PM

ಕಾಪು : ಇಲ್ಲಿನ ಗದ್ದಿಗೆಬೆಟ್ಟು ಕೈಪುಂಜಾಲು ಉಳಿಯಾರಗೋಳಿಯ ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ (ರಿ.)ದ ಸಮಗ್ರ ಜೀರ್ಣೋದ್ಧಾರ ಪ್ರಕ್ರಿಯೆಗಳು ಪ್ರಾರಂಭಗೊಂಡಿರುತ್ತದೆ.

ಆ ಪ್ರಯುಕ್ತ ನೂತನ ಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಫೆಬ್ರವರಿ 03, ಶುಕ್ರವಾರ ಬೆಳಿಗ್ಗೆ 8.30ಕ್ಕೆ ನೆರವೇರಲಿರುವುದು. ಈ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ , ಪದ್ಮಶ್ರೀ ಡಾ| ಬಿ. ಆರ್. ಶೆಟ್ಟಿ ಭಾಗವಹಿಸಲಿರುವರು.

ಭಕ್ತಾಭಿಮಾನಿಗಳು ಪಾಲ್ಗೊಂಡು ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.