ಕಾಪು : ಇಲ್ಲಿನ ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆ ಕಳತ್ತೂರು ಇಲ್ಲಿ ಮಾರ್ಚ್ 3 ರಂದು ಶಾಲೆಯ ನಿವೃತ್ತ ಶಿಕ್ಷಕ ಗೋಪಾಲ ಕೃಷ್ಣ ರಾವ್ ಇವರಿಗೆ ನಡೆಯುವ ಗುರುವಂದನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮದ ಪೂರ್ವಭಾವಿ ಸಭೆ ಆದಿತ್ಯವಾರ ಶಾಲೆಯ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗಂಗಾ ನಾಯ್ಕ್, ವೇಣುಗೋಪಾಲ್ ರಾವ್, ಪ್ರಮುಖರಾದ ನಿತ್ಯಾನಂದ ಶೆಟ್ಟಿ, ಶಿವರಾಮ್ ಶೆಟ್ಟಿ ಪೈಯ್ಯಾರು, ಗಣೇಶ್ ಶೆಟ್ಟಿ ಪೈಯ್ಯಾರು, ಅನಿಲ್ ಶೆಟ್ಟಿ, ಪ್ರಸಾದ್ ಭಂಡಾರಿ ಹಾಗೂ ಶಾಲಾ ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.