ಕಾಪು : ಬೆಳಪು ವಿಜ್ಞಾನ ಕೇಂದ್ರಕ್ಕೆ ಈ ಬಾರಿಯ ಬಜೆಟ್ ನಲ್ಲಿ ಹಣ ಮೀಸಲಿಟ್ಟು ಕಾಮಗಾರಿ ಪೂರ್ಣಗೊಳ್ಳಲಿ - ಡಾ|| ದೇವಿ ಪ್ರಸಾದ್ ಶೆಟ್ಟಿ
Posted On:
14-02-2023 12:07AM
ಕಾಪು : ಕಳೆದ 7 ವರ್ಷಗಳಿಂದ ಕಾಮಗಾರಿ ಕುಂಠಿತಗೊಂಡ ಬೆಳಪುವಿನ ವಿಜ್ಞಾನ ಕೇಂದ್ರ ಹಾಗೂ ಪಿಜಿ ಸೆಂಟರ್ ಗೆ ಈ ಬಾರಿಯ ಬಜೆಟ್ ನಲ್ಲಿ ಕನಿಷ್ಠ 50 ಕೋಟಿ ಹಣ ಇಡಬೇಕೆಂದು ಬೆಳಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡಾ. ದೇವಿ ಪ್ರಸಾದ್ ಶೆಟ್ಟಿ ಬೆಳಪುವಿನಲ್ಲಿ ಆಗ್ರಹಿಸಿದ್ದಾರೆ.
ಬೆಳಪುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಜ್ಞಾನ ಕೇಂದ್ರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಲನ್ಯಾಸ ನೆರವೇರಿಸಿ ಮೂವತ್ತಮೂರು ಕೋಟಿ ರೂಪಾಯಿ ಬಿಡುಗಡೆಗೊಳಿಸಿದ್ದರು.
33 ಕೋಟಿ ರೂಪಾಯಿಯಲ್ಲಿ ಕಾಮಗಾರಿ ಪ್ರಾರಂಭಗೊಂಡಿತ್ತು. ಅದರ 12 ಕೋಟಿ ರೂಪಾಯಿಯನ್ನು ಇತರ ಕಾಮಗಾರಿಗೆ ತೆಗೆಯಲಾಗಿದೆ. ಗುತ್ತಿಗೆದಾರರಿಗೆ ಹಣಪಾವತಿಯಾಗದೆ ಕೆಲಸ ಸ್ಥಗಿತಗೊಂಡಿದೆ.
ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಆದರೂ ಕಾಮಗಾರಿ ಪೂರ್ಣ ಆಗುವ ಭರವಸೆ ಇದ್ದರೂ, ಕೆಲಸ ಪೂರೈಸುವ ಸಾಧ್ಯತೆ ಕಡಿಮೆ ಇದೆ. ಐದು ವರ್ಷದಲ್ಲಿ ಸರಕಾರ ನಯಾ ಪೈಸೆ ಹಣ ಮಂಜೂರಾತಿ ಮಾಡಿಲ್ಲ.
ಈ ಬಾರಿಯ ಬಜೆಟ್ಟಿನಲ್ಲಿ ಹಣ ಮೀಸಲಿಟ್ಟು ಕಾಮಗಾರಿ ಪೂರ್ಣಗೊಳ್ಳಲಿ ಎಂದು ದೇವಿ ಪ್ರಸಾದ್ ಶೆಟ್ಟಿ ಆಗ್ರಹಿಸಿದರು.