ಪವಿತ್ರವಾದ ತುಳುನಾಡಿನಲ್ಲಿ ದೈವರಾಧನೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಅದೇ ಪ್ರಕಾರ ತುಳುನಾಡ ನಲ್ಲಿ ತುಳು ಭಾಷೆಗೆ ಅದರದೇ ಆದ ಸಾವಿರಾರು ವರ್ಷಗಳ ವಿಶಿಷ್ಟವಾದ ಸ್ಥಾನಮಾನ ಗೌರವ ಆಚಾರ ವಿಚಾರ ಸಾಹಿತ್ಯ ಸಂಸ್ಕೃತಿ ಹಿನ್ನೆಲೆ ಇದೆ.
ಪಂಚ ದ್ರಾವಿಡ ಭಾಷೆಗಳಲ್ಲಿಯೂ ತುಳು ಭಾಷೆ ಕೂಡ ಒಂದು. ತುಳು ಭಾಷೆಗೆ ತನ್ನದೇ ಆದ ಲಿಪಿ ಇದೆ. ರಾಜಕೀಯ ಕುತಂತ್ರದಿಂದ ಇನ್ನೂ ಕೂಡ ತುಳು ಭಾಷೆಗೆ ರಾಷ್ಟ್ರೀಯ ಸ್ಥಾನಮಾನ ಕೊಡಿಸಲು ವಿಫಲವಾಗಿದೆ ಎಂದು ಅಖಿಲ ಭಾರತ ತುಳುನಾಡ ದೈವರಾಧಾಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆಯ ಸಂಸ್ಥಾಪಕರು ಹಾಗೂ ಪ್ರಧಾನ ಕಾರ್ಯದರ್ಶಿಯಾದ ವಿನೋದ್ ಶೆಟ್ಟಿ ತಿಳಿಸಿದ್ದಾರೆ.
ತುಳುನಾಡಿನಲ್ಲಿ ತುಳುವರೂ ಯಾವುದೇ ಕಷ್ಟ ಸಂದರ್ಭದಲ್ಲಿ, ಶುಭ ಸಂದರ್ಭದಲ್ಲಿ ಮೊದಲು ದೈವಗಳಿಗೆ ಹರಕೆ ಹೇಳುವುದು. ಕೈ ಮುಗಿಯುವುದು ತುಳುವರ ನಂಬಿಕೆ. ನಾವು ನಂಬಿದ ದೈವಗಳು ಅಭಯವಾಕ್ಯ ಕೊಡುವುದು ತುಳು ಭಾಷೆಯಲ್ಲಿ. ಅನಾದಿ ಕಾಲದಿಂದ ಬಂದಂತ ಪದ್ಧತಿ. ನಮ್ಮ ನಂಬಿಕೆಗೆ ನಮ್ಮ ಶ್ರದ್ಧಾ ಭಕ್ತಿ ನಮ್ಮ ಮಾತೃಭಾಷೆಗೆ ಅಪಹಾಸ್ಯ, ಅಪಮಾನ ಮಾಡಿದರೆ ನಾವು ತುಳುವರು ಸಹಿಸುವುದಿಲ್ಲ. ಆದ್ದರಿಂದ ವಿಧಾನಸಭಾ ಕಲಾಪದಲ್ಲಿ ಯು ಟಿ ಖಾದರ್ ಹೇಳಿಕೆಗೆ ಪ್ರತಿ ವಿರೋಧ, ಅಪಹಾಸ್ಯ, ದೈವ ದೇವರ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿದ ಕರ್ನಾಟಕ ಸರ್ಕಾರದ ಸಚಿವರಾದ ಮಾಧು ಸ್ವಾಮಿ ಅವರು ಸಮಸ್ತ ತುಳು ನಾಡಿನ ಒಂದು ಕೋಟಿ ಹೆಚ್ಚು ಜನಸಂಖ್ಯೆ ಇರುವ ತುಳುವರ ಮನಸ್ಸಿಗೆ ತುಳುವರ ನಂಬಿಕೆ, ಭಕ್ತಿ, ಶ್ರದ್ಧೆಗೆ, ದೈವರಾಧನೆಗೆ ಧಕ್ಕೆ ತಂದಿದ್ದಾರೆ, ಬೇಸರ ತಂದಿದ್ದಾರೆ.
ಇಷ್ಟರ ತನಕ ನಮ್ಮ ಕರಾವಳಿಯ ಶಾಸಕರು ಇದರ ವಿರುದ್ಧವಾಗಿ ಮಾತನಾಡಲಿಲ್ಲ. ಯಾಕೆ ಮೌನ ಈ ವಿಚಾರ ನಿಮಗೆ ಶೋಭೆ ತರುತ್ತದೆಯೇ?
ಕರ್ನಾಟಕ ಸರ್ಕಾರದ ಸಚಿವರಾದ ಮಾಧು ಸ್ವಾಮಿ ಬಹಿರಂಗವಾಗಿ ತಪ್ಪು ಒಪ್ಪಿಕೊಳ್ಳಬೇಕು. ಕ್ಷಮೆ ಕೇಳಬೇಕು. ಇಲ್ಲವಾದರೆ ಮುಂದಿನ ದಿವಸಗಳಲ್ಲಿ ಇದರ ವಿರುದ್ಧವಾಗಿ ಪ್ರತಿಭಟನೆ ಮಾಡಲಾಗುವುದು. ಇದನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿರುತ್ತಾರೆ.