ಕಾಪು : ಶಂಕರಪುರ ಇನ್ನರ್ ವೀಲ್ ಕ್ಲಬ್ ಗೆ ಜಿಲ್ಲಾ ಚೇರ್ಮೆನ್ ಅಧಿಕೃತ ಭೇಟಿ
Posted On:
20-02-2023 01:39PM
ಕಾಪು : ತಾಲೂಕಿನ ಶಂಕರಪುರ ಇನ್ನರ್ ವೀಲ್ ಕ್ಲಬ್ ಗೆ ಶುಕ್ರವಾರದಂದು ಇನ್ನರ್ ವೀಲ್ ಜಿಲ್ಲಾ ಚೇರ್ಮೆನ್ ಕವಿತಾ ನಿಯತ್ ಅಧಿಕೃತ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಂಕರಪುರದ ಮುಖ್ಯ ಬೆಳೆಯಾದ ಮಲ್ಲಿಗೆ ಕೃಷಿ ಹಾಗೂ ಹೂವಿನ ಬಗ್ಗೆ ಮತ್ತು ಶಂಕರಪುರ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಈ ಸಂದರ್ಭ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಉದಯೋನ್ಮುಖ ಸಂಗೀತಗಾರ ಆಯುಷ್ ರೇಗನ್ ಮಿನೇಜಸ್ ಹಾಗೂ ಶಿರ್ವದಲ್ಲಿ ವಿಭಿನ್ನ
ಶಕ್ತಿಯ ಮಕ್ಕಳಿಗೆ ತರಬೇತಿ ಹಾಗೂ ತರಗತಿಯನ್ನು ನೀಡುತ್ತಿರುವ ವಿಶಿಷ್ಟ ಸಂಸ್ಥೆಯ ಸ್ಥಾಪಕಿ ಫ್ಲೋರಿನ್ ರಿಮಾ ಮಿನಜಸ್ ಅವರನ್ನು ಸನ್ಮಾನಿಸಲಾಯಿತು.
ಸುಭಾಷ್ ನಗರ ಸರಕಾರಿ ಗುಡ್ಡೆ ಹಾಗೂ ಶಂಕರಪುರ ಪರಿಸರದಲ್ಲಿ ಅಡ್ಡರಸ್ತೆಯ ಗುರುತಿನ 9 ನಾಮಫಲಕಗಳನ್ನು ಉದ್ಘಾಟಿಸಿ ಲೋಕಾರ್ಪಣೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಅತಿಥಿಯಾಗಿ ಆಗಮಿಸಿದ್ದ ಸಿ. ಜಿ .ಆರ್. ದೀಪ ಭಂಡಾರಿ ಸಂಸ್ಥೆಯ ಗ್ರಹ ಪತ್ರಿಕೆ "ಹೊಂಗಿರಣ" ಅನ್ನು ಬಿಡುಗಡೆಗೊಳಿಸಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ಕೊಂಡಾಡಿದರು. ರೋಟರಿ ಸದಸ್ಯರು, ಜೆಸಿಐ ಸದಸ್ಯರು, ವಿವಿಧ ಇನ್ನರ್ ವೀಲ್ ಕ್ಲಬ್ ಗಳಿಂದ ಆಗಮಿಸಿದ ಸದಸ್ಯರು ಉಪಸ್ಥಿತರಿದ್ದರು.
ಎಲಿಸಾ ಮಾರ್ಟಿಸ್ ಪ್ರಾರ್ಥಿಸಿದರು.
ಅಧ್ಯಕ್ಷರಾದ ಶಾಲಿನಿ ಚಂದ್ರ ಸ್ವಾಗತಿಸಿದರು. ಲೀನಾ ಮೆಂಡೋನ್ಸ ಕಾರ್ಯಕ್ರಮ ನಿರೂಪಿಸಿದರು. ಆಲಿಸ್ ರೋಡ್ರಿಗಸ್ ವಂದಿಸಿದರು.