ಪಡುಬಿದ್ರಿ : ಇಲ್ಲಿನ ಕಲ್ಲಟ್ಟೆ ಜಾರಂದಾಯ ದೈವಸ್ಥಾನದಿಂದ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ನಡೆಯಲಿರುವ ಢಕ್ಕೆ ಬಲಿ ಸೇವೆಯ ಪ್ರಯುಕ್ತ
ಫಲಪುಷ್ಪ ತಾಂಬೂಲ ಪರಿಕರ ಹೊರಕಾಣಿಕೆ
ಮೆರವಣಿಗೆಯು ಮಂಗಳವಾರ ವಿಜೃಂಭಣೆಯಿಂದ ಜರಗಿತು.
ಮಧ್ಯಾಹ್ನ ಜಾರಂದಾಯ ದೈವಸ್ಥಾನದಲ್ಲಿ ಅನ್ನಸಂತರ್ಪಣೆಯು ಜರಗಿದ್ದು ಸುಮಾರು ಐದು ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದ್ದರು.
ಹೊರೆ ಕಾಣಿಕೆ ಮೆರವಣಿಗೆಯಲ್ಲಿ ಪಡುಬಿದ್ರಿ - ಮುಂಬಯಿ ಕಲ್ಲಟ್ಟೆ ಶ್ರೀ ಜಾರಂದಾಯ ಸೇವಾ ಸಮಿತಿ, ಕಲ್ಲಟ್ಟೆ ಶ್ರೀ ಜಾರಂದಾಯ ಯುವಕ ವೃಂದ, ಕಲ್ಲಟ್ಟೆ ಶ್ರೀ ಜಾರಂದಾಯ ಮಹಿಳಾ ಮಂಡಲ, ಗುರಿಕಾರರು, ಊರ ಹತ್ತು ಸಮಸ್ತರು ಪಾಲ್ಗೊಂಡಿದ್ದರು.