ದಿನದ ಪ್ರಯುಕ್ತ ಸುಮಾರು 25 ವರ್ಷಗಳ ಕಾಲ ಪತ್ರಕರ್ತರಾಗಿ ಹಲವಾರು ಸಾಧನೆಗಳನ್ನು ಮಾಡಿರುವ ಹಿರಿಯ ಪತ್ರಕರ್ತರಾದ ಕಿರಣ್ ಮಂಜನಬೈಲು ಅವರನ್ನು ಜುಲೈ 1 ರಂದು ಸ್ವಚ್ಛ ಭಾರತ್ ಫ್ರೆಂಡ್ಸ್ ಮತ್ತು ಜೇಸಿಐ ಉಡುಪಿ ಸಿಟಿ ವತಿಯಿಂದ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯುನ್ಮಾನ ಪತ್ರಿಕೆಗಳ ಯುಗದಲ್ಲಿಯೂ ಪತ್ರಿಕಾ ಮಾಧ್ಯಮ ಸೃಜನಶೀಲತೆಯನ್ನು ಸೂಕ್ತ ರೀತಿಯಲ್ಲಿ ಅಳವಡಿಸಿಕೊಂಡು ತನ್ನ ಸುಸ್ಥಿರತೆಯನ್ನು ಕಾಯ್ದುಕೊಂಡಿರುವುದು ಶ್ಲಾಘನೀಯ ಬೆಳವಣಿಗೆ. ಕೊರೊನಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಕವಲು ದಾರಿಯಲ್ಲಿದ್ದ ಪತ್ರಿಕೋದ್ಯಮ ಹಲವಾರು ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಿಕೊಂಡು ಸಮತೋಲನವನ್ನು ಕಾಪಾಡಿಕೊಂಡು ಜನಧ್ವನಿಯನ್ನು ಗಟ್ಟಿಗೊಳಿಸಿ ಸಮಯೋಚಿತವಾಗಿ ಜಾಗೃತಿಯನ್ನು ಮೂಡಿಸುತ್ತಿದೆ. ಪತ್ರಿಕಾ ರಂಗವು ಸಂದರ್ಭಕ್ಕೆ ಅನುಗುಣವಾಗಿ ಸಮಾಜದ ಬೆನ್ನೆಲುಬಾಗಿ ಚಿರಾಯುವಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜನಾರ್ಧನ ಕೊಡವೂರು, ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್ ಜಿ. ನಾಯಕ್, ರಾಘವೇಂದ್ರ ಪ್ರಭು ಕರ್ವಾಲು, ಉದಯ ನಾಯ್ಕ್ ಮತ್ತು ವೀಕ್ಷಿತ್ ಉಪಸ್ಥಿತರಿದ್ದರು.