ಪಡುಬಿದ್ರಿ : ಕ್ಷುಲ್ಲಕ ಕಾರಣ ; ಹಲ್ಲೆ, ಜೀವಬೆದರಿಕೆ ; ಇತ್ತಂಡಗಳಿಂದ ದೂರು
Posted On:
27-02-2023 10:41PM
ಪಡುಬಿದ್ರಿ : ಕ್ಷುಲ್ಲಕ ಕಾರಣದಿಂದ ಇತ್ತಂಡಗಳ
ನಡುವೆ ಹಲ್ಲೆ, ಜೀವಬೆದರಿಕೆ ಬಗ್ಗೆ ಆದಿತ್ಯವಾರ ದೂರು ಪ್ರತಿದೂರು ಪಡುಬಿದ್ರಿ ಠಾಣೆಯಲ್ಲಿ ದಾಖಲಾಗಿದೆ.
ವಸಂತ ಮತ್ತು ಬಾಲು ಎಂಬುವವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಿವಪ್ರಕಾಶ್ ಎಂಬುವವರು ಪಡುಬಿದ್ರಿ ಠಾಣೆಯಲ್ಲಿ ದೂರು
ದಾಖಲಿಸಿದ್ದು, ಜೀವ ಬೆದರಿಕೆ ಹಾಕಿರುವ ಬಗ್ಗೆ ನವೀನ್ ಎಂಬುವವರು ಪ್ರತಿದೂರು ನೀಡಿದ್ದಾರೆ.
ಪಡುಬಿದ್ರಿಯ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ನಡೆಯುತ್ತಿರುವ ಢಕ್ಕೆಬಲಿಗೆ ಶಿವಪ್ರಕಾಶ್, ತಮ್ಮ ಆದರ್ಶ್, ಹಾಗೂ ಇಬ್ಬರು ಸ್ನೇಹಿತರಾದ ಧನುಷ್ ಮತ್ತು ಪ್ರತೀಕ್ ಎಂಬುವರೊಂದಿಗೆ ಹೋಗಿದ್ದು, ರಾತ್ರಿ 1 ಗಂಟೆಯ ವೇಳೆಗೆ ಶಿವಪ್ರಕಾಶ್ ಮೂತ್ರ ವಿಸರ್ಜನೆಗೆಂದು ಹೋದ ಸಮಯ ವಸಂತ ಹಾಗೂ ಬಾಲುರವರು ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ ಎಂದು ದೂರನಿತ್ತಿದ್ದಾರೆ.
ಅದೇ ದಿನ ನವೀನ್ ಅವರ ಸ್ನೇಹಿತರಾದ ರಾಕೇಶ್, ದಿವಾಕರ, ಬಾಲಕೃಷ್ಣ ಎಂಬುವವರ ಜೊತೆಗೆ ಹೋಗಿದ್ದು ರಾತ್ರಿ 1 ಗಂಟೆಯ ವೇಳಗೆ ಬ್ರಹ್ಮಸ್ಥಾನದ ನೀರಿನ ಟ್ಯಾಂಕ್ ಬಳಿ ಬ್ರಹ್ಮಸ್ಥಾನದ ಕಡೆಗೆ ಹೋಗುತ್ತಿರುವಾಗ ಶಿವಪ್ರಕಾಶ್ ಎಂಬಾತನು ತಡೆದು ನಿಲ್ಲಿಸಿ ವಸಂತ ಎಲ್ಲಿದ್ದಾನೆ ಎಂದು ಕೇಳಿ, ಚೂರಿ ಹಾಕಿ ಕೊಲ್ಲುತ್ತೇನೆ ಎಂದ ಜೀವ ಬೆದರಿಕೆ ಹಾಕಿರುವುದಾಗಿ ನವೀನ್ ದೂರಿನಲ್ಲಿ ತಿಳಿಸಿದ್ದಾರೆ.