ಹೆಜಮಾಡಿ : ಶ್ರೀ ಬ್ರಹ್ಮಮುಗ್ಗೆರ್ಕಳ ದೈವಸ್ಥಾನ, ಹೆಜಮಾಡಿ ಕೋಡಿ ಮತ್ತು ಗ್ರಾಮಸ್ಥರ ಸಹಭಾಗಿತ್ವದಲ್ಲಿ ಊರಿನ ಮಾರಿಯನ್ನು ಓಡಿಸುವ ಕಂಗೀಲು ಸೇವೆಗೆ ಮಾಚ್೯ 8 ರಂದು ಆದಿಸ್ಥಳವಾದ ಹೆಜಮಾಡಿ ಮುಗ್ಗೆರ್ಕಳ ದೈವಸ್ಥಾನದಲ್ಲಿ ಚಾಲನೆ ನೀಡಲಾಯಿತು.
ಹೆಜಮಾಡಿ ಆಲಡೆ ಆಯನದ ಮರುದಿನ ನಡೆಯುವ ಕಂಗೀಲು ಆದಿಸ್ಥಳವಾದ ಹೆಜಮಾಡಿ ಮುಗ್ಗೆರ್ಕಳ ದೈವಸ್ಥಾನದಲ್ಲಿ ಸಿರಿ ಕಟ್ಟಿ ಹೆಜಮಾಡಿ ಬ್ರಹ್ಮಸ್ಥಾನಕ್ಕಾಗಿ, ಹೆಜಮಾಡಿ ಅಳಿವೆ ಕೋಡಿಯಿಂದ ಶ್ರೀ ವೀರ ಮಾರುತಿ ದೇವಸ್ಥಾನವಾಗಿ, ಫಲಿಮಾರು, ಚರಂತಿಪೇಟೆ, ಬಪ್ಪನಾಡು, ಮಾನಂಪಾಡಿ ಕೋಡಿ, ಪರಪಟ್ಟ, ಹೊಸಾಗೈ, ಕಡವಿನ ಬಾಗಿಲು, ಗುಂಡಿಮನೆಯ ತೋಟದಿಂದ ದೊಡ್ಡಮನೆ ತೋಟವಾಗಿ, ಮಟ್ಟು ಪಟ್ಣ ಭಜನಾ ಮಂದಿರದ ಬಳಿಯಿಂದ ಉತ್ತರ ಸುಲ್ತಾನ್ ರಸ್ತೆಯಾಗಿ ಹೆಜಮಾಡಿ ಗಡುವಿನಲ್ಲಿ ಸಿರಿ ಬಿಡುವುದು.
ಈ ಸಂದರ್ಭ ಬ್ರಹ್ಮಮುಗ್ಗೆರ್ಕಳ ದೈವಸ್ಥಾನದ ಪ್ರಮುಖರು, ಊರಿನ ಪ್ರಮುಖರು ಉಪಸ್ಥಿತರಿದ್ದರು.