ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ : ಹಾವಂಜೆಯ ಬಂಟ್ಸ್ ಫ್ರೆಂಡ್ಸ್ ಸಂಘದಿಂದ ವಿಶ್ವ ಮಹಿಳೆಯರ ದಿನಾಚರಣೆ ಕಾರ್ಯಕ್ರಮ

Posted On: 08-03-2023 11:26PM

ಉಡುಪಿ : ಬಂಟ್ಸ್ ಫ್ರೆಂಡ್ಸ್ ಸಂಘ ಹಾವಂಜೆ ಸಂಘದ ವತಿಯಿಂದ ಹಾವಂಜೆ ಮಂಜುನಾಥ ಸಭಾಭವನದಲ್ಲಿ ವಿಶ್ವ ಮಹಿಳೆಯರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಪಂಚಾಯತ್ ಸದಸ್ಯರು, ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಯು ನ ರಮೇಶ್ ಶೆಟ್ಟಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯ ಶಿಕ್ಷಕಿ ಶಶಿಕಲಾ ಶೆಟ್ಟಿ ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಯು ಶೆಟ್ಟಿ, ಉಷಾ ಶೆಟ್ಟಿ, ಸುಗುಣ ಡಿ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತಿಯಿದ್ದರು. ಸನ್ಮಾನ, ಬಹುಮಾನ ವಿತರಣೆ : ಬಂಟ ಸಮುದಾಯದ ಹಿರಿಯ ಸಾಧಕರಾದ ರಾಧಮ್ಮ ಶೆಟ್ಟಿ, ಅಕ್ಕಯ್ಯ ಶೆಟ್ಟಿ, ಮೀನಕ್ಕ ಶೆಟ್ಟಿ, ಮೈರ ಶೆಟ್ಟಿ, ಯುವ ಪ್ರತಿಭೆಗಳಾದ ಕುಮಾರಿ ಪ್ರಜ್ಞಾ ಪಿ.ಶೆಟ್ಟಿ , ಕುಮಾರಿ ರಿಯಾ ಜಿ.ಶೆಟ್ಟಿ , ಕುಮಾರಿ ಸ್ಮಿರ ಪಿ. ಶೆಟ್ಟಿ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಪ್ರಮುಖರಾದ ನಿವೃತ್ತ ಕ್ರೀಡಾ ಶಿಕ್ಷಕ ಸೀತಾರಾಮ್ ಶೆಟ್ಟಿ, ಶಿಕ್ಷಕ ಪ್ರಶಾಂತ್ ಶೆಟ್ಟಿ, ಉದಯ್ ಶೆಟ್ಟಿ, ಅರುಣ್ ಶೆಟ್ಟಿ, ನಾರಾಯಣ ಶೆಟ್ಟಿ, ಸುರೇಶ್ ಶೆಟ್ಟಿ, ನಮ್ಮ ಉಡುಪಿ ಟಿವಿ ಹಾಗೂ ವಿ ಸ್ ಗ್ರೂಪ್ ನಿರ್ದೇಶಕರು ಹಾಗೂ ಅಖಿಲ ಭಾರತ ತುಳುನಾಡು ದೈವಾರಾಧಕರ ಒಕ್ಕೂಟ (ರಿ )ಉಡುಪಿ ಜಿಲ್ಲೆ ಸಂಸ್ಥಾಪಕರಾದ, ವಿನೋದ್ ಶೆಟ್ಟಿ, ಅರುಣ ಶೆಟ್ಟಿ, ಮಹಿಳಾ ವಿಭಾಗದ ಸದಸ್ಯರು ಉಪಸ್ಥಿತಿ ಇದ್ದರು.

ಶಿಕ್ಷಕಿ ಪದ್ಮ ಪಿ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಆಶಾ ಹರೀಶ್ ಶೆಟ್ಟಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಊರಿನ ಯುವ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.