ಕಾಪು : ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಬಗ್ಗೆ ಸೇರಿಸಲು ಎಸ್‌ಐಓ ಆಗ್ರಹ
Posted On:
10-03-2023 05:17PM
ಕಾಪು : ವಿಧಾನಸಭಾ ಕ್ಷೇತ್ರದಲ್ಲಿರುವ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಹಾಗೂ ಮೌಲಾನಾ ಆಝಾದ್ ವಸತಿ ಶಾಲೆಗೆ ಹೊಸ ಕಟ್ಟಡ ರಚನೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮುಂಬರುವ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ವಿವಿಧ ಪಕ್ಷಗಳು ಸೇರಿಸಬೇಕು ಎಂದು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಒತ್ತಾಯಿಸಿದೆ.
ಕಾಪು ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಐಓ ಜಿಲ್ಲಾಧ್ಯಕ್ಷ ಅಯಾನ್ ಮಲ್ಪೆ ಮಾತನಾಡಿ 2023ರ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಕೆಯಲ್ಲಿ ವಿದ್ಯಾರ್ಥಿ-ಯುವಜನರ ಬೇಡಿಕೆಯ ವಿಚಾರಗಳನ್ನು ಸೇರಿಸಬೇಕು. ಯುವಜನರ ಮತಗಳನ್ನು ನಿರ್ಣಯಿಸುವಂತೆ ಜನಾಭಿಪ್ರಾಯ ಜನಾಭಿಪ್ರಾಯ ಮೂಡಿಸಲು ಎಸ್‌ಈಐ ಶಿಕ್ಷಣದ ಮೂಲಭಾಗದಾರರೊಂದಿಗೆ ಸಮಾಲೋಚಿಸಿ ವಿದ್ಯಾರ್ಥಿ ಪ್ರಣಾಳಿಕೆಯನ್ನು ತಯಾರುಗೊಳಿಸಿದ್ದು, ಪಕ್ಷಗಳು ಬೇಡಿಕೆಗಳನ್ನು ಈಡೀರಿಸಲು ಪ್ರಾಮಾಣಿಕ ಪ್ರಯತ್ನ ಬದ್ಧತೆಯನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿದೆ.
ಜಿಲ್ಲೆಗೊಂಡು ಸರ್ಕಾರಿ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದ್ದು, ವೈದ್ಯಕೀಯ ಶಿಕ್ಷಣ ಬಡ ಹಾಗೂ ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದೂ ಅಯಾನ್ ಮಲ್ಪೆ ಹೇಳಿದ್ದಾರೆ.
ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ನಿಫಾಲ್ ಹೂಡೆ, ಪರ್ಹಾನ್, ಸದಸ್ಯರಾದ ನೋಮಾನ್, ನಿಹಾಲ್, ಅಯಾನ್ ಕಾಪು, ಅಹದ್ ಕಾಪು, ಅವೇಝ್ ಉಪಸ್ಥಿತರಿದ್ದರು.