ಪಡುಬಿದ್ರಿ : ಇಲ್ಲಿನ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ದ್ವೈವಾರ್ಷಿಕವಾಗಿ ಜರಗುವ ಢಕ್ಕೆ ಬಲಿ ಸೇವೆ ಮತ್ತು ಮಂಡಲ ವಿಸರ್ಜನೆಯು ನಾಳೆ (ಮಾಚ್೯ 11, ಶನಿವಾರ) ಸಂಪನ್ನಗೊಳ್ಳಲಿದೆ.
ಈ ಪ್ರಯುಕ್ತ ಮಧ್ಯಾಹ್ನ ಗಂಟೆ 12ಕ್ಕೆ ಸರಿಯಾಗಿ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಮತ್ತು ಸಂಜೆ ಗಂಟೆ 4:30ಕ್ಕೆ ಫಲಪುಷ್ಪ ತಾಂಬೂಲ ಪರಿಕರ ಹೊರೆ ಕಾಣಿಕೆ ಮೆರವಣಿಗೆ, ರಾತ್ರಿ ಸನ್ನಿಧಾನದಲ್ಲಿ ತಂಬಿಲ ಸೇವೆ ನಂತರ ಢಕ್ಕೆಬಲಿ ಸೇವೆ ಬಳಿಕ ಮಂಡಲ ವಿಸರ್ಜನೆ ಸೇವೆಯು ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.