ಮಂಗಳೂರು : ನ್ಯಾಯವಾದಿ, ಕವಯತ್ರಿ, ಮಕ್ಕಳ ಸಾಹಿತಿ ಪರಿಮಳ ರಾವ್ ಕೆ. ಸಾರಥ್ಯದ
ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಉದ್ಘಾಟನೆ ಅಂಗವಾಗಿ ಕಥಾಲಾಪ ಮತ್ತು ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಮಾಚ್೯ 12ರಂದು ನೆರವೇರಿತು.
ಕಾರ್ಯಕ್ರಮವನ್ನು NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಇಂದು ಅಧಿಕೃತವಾಗಿ ಅನಾವರಣಗೊಂಡಿದೆ. ದೇಶದಲ್ಲಿ ಲಕ್ಷಾಂತರ ಸ್ವಯಂ ಸೇವಾ ಸಂಸ್ಥೆಗಳು ಕರ್ತವ್ಯ ನಿರ್ವಹಿಸುತ್ತಿದೆ, ಸರಕಾರ ತಲುಪಲು ಸಾಧ್ಯವಾಗದ ಪ್ರದೇಶದಲ್ಲಿಯೂ ತನ್ನ ಕಾರ್ಯಚಟುವಟಿಕೆ ನಡೆಸುತ್ತಿದೆ. ಈ ಕಾರಣದಿಂದಾಗಿ ಭಾರತದ ಅನೇಕ ಹಳ್ಳಿ ಪ್ರದೇಶಗಳು ಅಭಿವೃದ್ಧಿಗೊಂಡಿವೆ. ಇದು ಸ್ವಯಂ ಸೇವಾ ಸಂಸ್ಥೆಯ ಕಾರ್ಯವೈಖರಿ ಎಂದ ಅವರು ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಪಾರದರ್ಶಕತ್ವವನ್ನು ಅನಾವರಣ ಗೊಳಿಸುತ್ತಾ ಸಮಾಜದ ಎಲ್ಲಾ ಸಮುದಾಯದ ಆಶಯಗಳಿಗೆ ಸ್ಪಂದಿಸುವಂತಾಗಬೇಕು. ಆಗಲೇ ಅನಾವರಣದ ಸಮಾಜಮುಖಿ ಕಾರ್ಯಗಳು ಈಡೇರಲು ಸಾಧ್ಯವೆಂದು ಮಾರ್ಮಿಕವಾಗಿ ಹೇಳಿದರು.
ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಸ್ಥಾನ ಅಧ್ಯಕ್ಷೆ , ನ್ಯಾಯವಾದಿ ಪರಿಮಳ ರಾವ್ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
KSSAP ಅಧ್ಯೆಕ್ಷೆ ರಾಣಿಪುಷ್ಪಲತಾದೇವಿ , ಕಥಾಲಾಪ ಅಧ್ಯಕ್ಷ ಮುಕ್ತಕ, ಗಜಲ್ ಕವಿ ಡಾ. ಸುರೇಶ್ ನೆಗಳಗುಲಿ , ಕಥಾಲಾಪ ಸಂಚಾಲಕಿ ಗೀತಾ ಲಕ್ಷ್ಮೀಶ ಉಪಸ್ಥಿತರಿದ್ದರು.
ಆಶ್ವಿಜ ಶ್ರೀಧರ್ ಪ್ರಾರ್ಥನೆಗೈದರು, ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ಪರಿಮಳ ರಾವ್ ಕೆ. ಸ್ವಾಗತಿಸಿ, ಪ್ರಾಸ್ತಾವನೆ ಗೈದರು. ರಶ್ಮಿ ಸನಿಲ್ ಕಾರ್ಯಕ್ರಮ ನಿರೂಪಿಸಿದರು.
ಕಥಾಲಾಪದಲ್ಲಿ ವ. ಉಮೇಶ್ ಕಾರಂತ್, ಅಶ್ವಿಜ ಶ್ರೀಧರ್, ಜಯರಾಮ ಪಡ್ರೆ, ರಾಮಾಂಜಿ ನಮ್ಮ ಭೂಮಿ, ಗೋಪಾಲಕೃಷ್ಣ ಶಾಸ್ತ್ರಿ, ರೇಖಾ ಸುದೇಶ್ ರಾವ್, ಶ್ಯಾಮಪ್ರಸಾದ್ ಭಟ್, ದೀಪಾ ಸದಾನಂದ್, ನವೀನ್ ಕುಮಾರ್ ಪೆರಾರ, ಮಾನ್ವಿ ಮಂಗಳೂರು, ಹಿತೇಶ್ ಕುಮಾರ್ ಎ, ಸುಗಂಧಿ ಶ್ಯಾಮ್, ಪದ್ಮನಾಭ ಮಿಜಾರು, ದೇವರಾಜ್ ಕುಂಬ್ಳೆ, ಚಿತ್ರಕಲಾ ದೇವರಾಜ್, ರೇಮಂಡ್ ಡಿಕೂನ ತಾಕೊಡೆ, ಅನುರಾಧಾ ರಾಜೀವ್, ಹರೀಶ್ ಮೆಲ್ಕಾರ್, ದಯಮಣಿ ಎಕ್ಕಾರ್, ವಾಣಿ ಲೋಕಯ್ಯ, ಸೌಮ್ಯ ಆರ್ ಶೆಟ್ಟಿ, ಎ. ಕೆ. ಕುಕ್ಕಿಲ ತಮ್ಮ ಸ್ವರಚಿತ ಕತೆಗಳನ್ನು ವಾಚಿಸಿದರು.
ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.