ಮಾ.31 ರಿಂದ ಏ.2 : ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಶಿಲಾಮಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಮೂರ್ತಿ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶಾಭಿಷೇಕ
Posted On:
13-03-2023 07:12AM
ಕಾಪು : ಇಲ್ಲಿನ ಬಿಲ್ಲವರ ಸಹಾಯಕ ಸಂಘ(ರಿ.) ಕಾಪು ಇಲ್ಲಿ ಮಾಚ್೯ 31ರಿಂದ ಏಪ್ರಿಲ್ 2 ರವರೆಗೆ
ಖ್ಯಾತ ವಾಸ್ತು ತಜ್ಞರಾದ ತ್ರಿವಿಕ್ರಂ ಭಟ್‌ರವರ ಮಾರ್ಗದರ್ಶನದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಮೂರ್ತಿ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶಾಭಿಷೇಕ, ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಭಾ ಕಾರ್ಯಕ್ರಮಗಳು ಜರಗಲಿದೆ.
ಆಗಮೋಕ್ತ ವೈದಿಕ ವಿಧಿಗಳು ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠ, ಸೋಲೂರು ಇಲ್ಲಿನ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ,
ಶಿವಗಿರಿಮಠದ ಮಠಾಧೀಶರಾದ ಶ್ರೀ ಪ್ರಭೋದ ತೀರ್ಥ ಸ್ವಾಮೀಜಿ ಇವರುಗಳ ಉಪಸ್ಥಿತಿಯಲ್ಲಿ ಕ್ಷೇತ್ರದ ಅರ್ಚಕರಾದ ಕಟಪಾಡಿ ಅರವಿಪುರಂ ಮಠದ ಚರಣ್ ಶಾಂತಿ ಪೌರೋಹಿತ್ಯದಲ್ಲಿ ನೆರವೇರಲಿದೆ.
ಮಾಚ್೯ 31, ಶುಕ್ರವಾರ ಧಾರ್ಮಿಕ ಕಾರ್ಯಕ್ರಮ, ಸಂಜೆ ಗಂಟೆ 3ಕ್ಕೆ ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಿಂದ ಮಂದಿರಕ್ಕೆ ಹೊರಡಲಿರುವ ಶ್ರೀ ವಿಠೋಭ ರುಕುಮಾಯಿ ದೇವರ ರಜತ ಕವಚ ಮತ್ತು ಪ್ರಭಾವಳಿ, ಶ್ರೀ ಗುರುದೇವರ ರಜತ ಪಾದುಕೆ, ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ, ಕರದಾಳ ಕಲಬುರ್ಗಿಯ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿ ಇವರು ಚಾಲನೆ ನೀಡುವರು.
ಸಂಜೆ ಗಂಟೆ 6ಕ್ಕೆ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಉದ್ಘಾಟಸಲಿದ್ದು, ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ, ಕರದಾಳ ಕಲಬುರ್ಗಿಯ ಶ್ರೀ ಪಣವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ
ಸತ್ಯಜಿತ್ ಸುರತ್ಕಲ್, ಪ್ರವೀಣ್ ಎಂ. ಪೂಜಾರಿ, ರಮೇಶ್ ಹೆಗ್ಡೆ, ಕಲ್ಯ, ಪ್ರಸಾದ್ ಗೋಕುಲ್‌ದಾಸ್ ಶೆಣೈ, ಉಮೇಶ್ ಕಾಪು, ಗೀತಾಂಜಲಿ ಸುವರ್ಣ,
ಶಿಲ್ಪಾ ಜಿ. ಸುವರ್ಣ, ಚಲನಚಿತ್ರ ನಟರಾದ ಪೃಥ್ವಿ ಅಂಬಾರ್, ಚಿರಶ್ರೀ ಅಂಚನ್ ಹಾಗೂ ಗೌರವ ಉಪಸ್ಥಿತಿಯಲ್ಲಿ ಪ್ರಭಾಕರ ಎಸ್. ಪೂಜಾರಿ, ಚರಣ್ ಶಾಂತಿ ಭಾಗವಹಿಸಲಿದ್ದಾರೆ.
ಈ ಸಂದರ್ಭ ಸಂಘದ ಮಾಜಿ ಅಧ್ಯಕ್ಷರುಗಳಿಗೆ, ಹೆಜಮಾಡಿಯಿಂದ ಉದ್ಯಾವರದವರೆಗೆ
ಕಾಪು ವ್ಯಾಪ್ತಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಮತ್ತು ದೈವಸ್ಥಾನಗಳ ಅರ್ಚಕರಿಗೆ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ದರ್ಶನ ಪೂಜಾರಿಗಳಿಗೆ, ಬಿಲ್ಲವ ಸಂಘಗಳ ಅಧ್ಯಕ್ಷರುಗಳಿಗೆ ಹಾಗೂ ರೂ.10 ಸಾವಿರದಿಂದ ಮೇಲ್ಪಟ್ಟು ರೂ.25 ಸಾವಿರದವರೆಗೆ ಆರ್ಥಿಕ ಸಹಾಯ ಮಾಡಿದ ದಾನಿಗಳಿಗೆ ಗೌರವಾರ್ಪಣೆ ನಡೆಯಲಿದೆ.
ಏಪ್ರಿಲ್ 1, ಶನಿವಾರ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿವೆ.
ಏಪ್ರಿಲ್ 2, ರವಿವಾರ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ ಗಂಟೆ 3ರಿಂದ 5:30ರ ತನಕ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾದಳ, ಕಾಪು ಹಾಗೂ ಗುರುಶ್ರೀ ಮಹಿಳಾ ಘಟಕದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ಗಂಟೆ 6 ರಿಂದ ಜರಗುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾಸಂಸ್ಥಾನ, ರೇಣುಕಾ ಪೀಠ, ಸೋಲೂರು ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ರಾಜಶೇಖರ ಕೋಟ್ಯಾನ್, ಹರೀಶ್ ಜಿ. ಅಮೀನ್, ಸೂರ್ಯಕಾಂತ್ ಜೆ. ಪೂಜಾರಿ, ಬಿ.ಎನ್. ಶಂಕರ ಪೂಜಾರಿ, ಮಟ್ಟಾರು ರತ್ನಾಕರ ಹೆಗ್ಡೆ, ಯೋಗೀಶ್ ಶೆಟ್ಟಿ, ಬಾಲಾಜಿ, ಪದ್ಮರಾಜ್ ಮಂಗಳೂರು, ಎನ್. ಟಿ. ಪೂಜಾರಿ, ಬಹುಭಾಷಾ ನಟ ಸುಮನ್ ತಲ್ವಾರ್, ಸತೀಶ್ ಪೂಜಾರಿ ಬೆಳಪು, ಉಮೇಶ್ ಕಾಪು, ಸರಿತ ಪೂಜಾರಿ ಹಾಗೂ ಗೌರವ ಉಪಸ್ಥಿತಿಯಲ್ಲಿ ಪ್ರಭಾಕರ ಎಸ್. ಪೂಜಾರಿ, ಚರಣ್ ಶಾಂತಿ, ಮಹೇಶ್ ಶಾಂತಿ ಭಾಗವಹಿಸಲಿದ್ದಾರೆ.
ಈ ಸಂದರ್ಭ ರೂ. 25,000 ದಿಂದ ಮೇಲ್ಪಟ್ಟು ಧನಸಹಾಯ ನೀಡಿದ ಎಲ್ಲಾ ದಾನಿಗಳಿಗೆ ಹಾಗೂ ಮಂದಿರದ ವಿವಿಧ ಕಾಮಗಾರಿಗಳ ವೆಚ್ಚವನ್ನು ಭರಿಸಿದ ದಾನಿಗಳನ್ನು ಗೌರವಿಸಲಾಗುವುದು.
ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರಾದ ವಿಕ್ರಂ ಕಾಪು ವಹಿಸಲಿದ್ದಾರೆ.
ರಾತ್ರಿ ಗಂಟೆ 9:30ರಿಂದ ರುದ್ರ ಥಿಯೇಟರ್ ಮಂಗಳೂರು ಅಭಿನಯಿಸುವ ವಿದ್ದು ಉಚ್ಚಿಲ್ ನಿರ್ದೇಶನದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ದಾಂತದ ಪರಿಕಲ್ಪನೆಯಲ್ಲಿ “ಶೂದ್ರ ಶಿವ” ಕನ್ನಡ ನಾಟಕ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.