ಕಾಪು : ಯುವಸೇನೆ ಮಡುಂಬು ಇನ್ನಂಜೆ ಇದರ 16ನೇ ವಾರ್ಷಿಕೋತ್ಸವ ಸಮಾರಂಭ ಏಪ್ರಿಲ್ 1, ಶನಿವಾರದಂದು ಮಡುಂಬು ಬೆರ್ಮೋಟ್ಟು ದೇವಸ್ಥಾನದ ಬಳಿ ನಡೆಯಲಿದೆ.
ಸಂಜೆ 6 ಗಂಟೆಯಿಂದ ಸ್ಥಳೀಯರಿಂದ ಸಾಂಸ್ಕೃತಿಕ ಮತ್ತು ಮನೋರಂಜನಾ ಕಾರ್ಯಕ್ರಮ
ರಾತ್ರಿ ಗಂಟೆ 8 ರಿಂದ ಸಭಾ ಕಾರ್ಯಕ್ರಮ ಜರಗಲಿದೆ.
ಸಭಾ ಕಾರ್ಯಕ್ರಮವನ್ನು ಕಾಪು ಮಡುಂಬುವಿನ
ಜ್ಯೋತಿಷಿ ಮತ್ತು ಪುರೋಹಿತರಾದ ವಿದ್ವಾನ್ ಕೆ.ಪಿ. ಶ್ರೀನಿವಾಸ ತಂತ್ರಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಭಾಗವಹಿಸಲಿದ್ದು, ಅತಿಥಿಗಳಾಗಿ ಕಾಪು ಶಾಸಕರಾದ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ,
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮಹೇಶ್ ಶೆಟ್ಟಿ ತಿಮ್ಮರೋಡಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ.) ಮಂಗಳೂರು ಅಧ್ಯಕ್ಷರಾದ ಯಶ್ಪಾಲ್ ಸುವರ್ಣ, ಗುರ್ಮೆ ಫೌಂಡೇಶನ್ ಕಳತ್ತೂರು ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆ, ಜನತಾದಳ (ಜಾತ್ಯತೀತ) ಉಡುಪಿ ಜಿಲ್ಲೆ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಖ್ಯಾತ ವಕೀಲರಾದ ಸಂಕಪ್ಪ ಅಮೀನ್, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸುನಿಲ್ ಡಿ. ಬಂಗೇರ, ಫ್ರೆಂಡ್ಸ್ ಕ್ಯಾಟರರ್ಸ್ ಶಂಕರಪುರ ಮಾಲಕರಾದ ನವೀನ್ ಅಮೀನ್, ಇನ್ನಂಜೆ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಾಜೇಶ್ ರಾವ್ ಪಾಂಗಾಳ, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಆಚಾರ್ಯ, ಶಾಂತ ಎಲೆಕ್ಟಿಕಲ್ಸ್ & ಇಂಜಿನಿಯರ್ಸ್ ಪ್ರೈ.ಲಿ. ಉಡುಪಿ ಇದರ ಆಡಳಿತ ನಿರ್ದೇಶಕರಾದ ಶ್ರೀಪತಿ ಭಟ್ ಉಪಸ್ಥಿತರಿರುವರು.
ರಾತ್ರಿ ಗಂಟೆ 9 ರಿಂದ ಶಾರದಾ ಆಟ್ಸ್೯ ಕಲಾವಿದೆರ್ ಮಂಜೇಶ್ವರ ತಂಡದಿಂದ ತುಳು ಹಾಸ್ಯಮಯ ನಾಟಕ ನಿತ್ಯೆ ಬನ್ನಗ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.