ಕಟಪಾಡಿ : ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್‌ನ ಅಂತಾರಾಷ್ಟ್ರೀಯ ಉಪಾಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ, ಉದ್ಯಮಿ ನವೀನ್ ಅಮೀನ್ ಶಂಕರಪುರ ಆಯ್ಕೆಯಾಗಿದ್ದಾರೆ.
ಕೇರಳದ ಮಾಹೆಯಲ್ಲಿ ನಡೆದ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರನ್ನು ಆಯ್ಕೆ ಮಾಡಲಾಯಿತು. ಜೆಸಿಐ ಶಂಕರಪುರ ಅಧ್ಯಕ್ಷ, ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಸಂಸ್ಥೆಯಲ್ಲಿ ರಾಷ್ಟ್ರೀಯ ಸಂಯೋಜಕ, ಶಂಕರಪುರ ರೋಟರಿ ಅಧ್ಯಕ್ಷ, ರೋಟರಿ ವಲಯ ಸೇನಾನಿ, ಸಹಾಯಕ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದಾರೆ.