ಕಾರ್ಕಳ : ಮೂಲ ಸೌಕರ್ಯಗಳನ್ನು ಒದಗಿಸುವ ನಿರಂತರ ಪ್ರಯತ್ನಗಳು ಸ್ಥಳೀಯಾಡಳಿತ ಮಾಡಿದಾಗ ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಜಿ.ಪಂ ಸದಸ್ಯರಾದ ಕೆದಿಂಜೆ ಸುಪ್ರಿತ್ ಶೆಟ್ಟಿ ಹೇಳಿದರು.
ಅವರು ಇಂದು ಇನ್ನಾ ಗ್ರಾಮ ಪಂಚಾಯತ್ ಸಾರ್ವಜಿನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷರು ಹಾಗೂ ಗ್ರಾ.ಪಂ ಅಧ್ಯಕ್ಷರಾದ ಕುಶ ಆರ್ ಮೂಲ್ಯ ವಹಿಸಿದ್ದರು.
ಈ ಸಂದರ್ಭ ಸರಿತಾ ಶೆಟ್ಟಿ, ಮಾಜಿ ಜಿ.ಪಂ ಸದಸ್ಯರಾದ ರೇಷ್ಮಾ ಉದಯ ಶೆಟ್ಟಿ, ತಾ.ಪಂ ಉಪಾಧ್ಯಕ್ಷರಾದ ಗೋಪಾಲ ಮೂಲ್ಯ, ಗ್ರಾ.ಪಂ ಉಪಾಧ್ಯಕ್ಷರಾದ ವಿಮಲ, ಪ್ರೇಮ್ ಕುಲಾಲ್, ಪಂಚಾಯತ್ ಕಾರ್ಯದರ್ಶಿ ರಮೇಶ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತ, ಅಮರನಾಥ ಶೆಟ್ಟಿ, ಜಯ ಎಸ್ ಕೋಟ್ಯಾನ್, ಪ್ರವೀಣ್ ಜೆ ಶೆಟ್ಟಿ, ಯು ಸುಬ್ರಮಣ್ಯ ತಂತ್ರಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಬೆಳ್ಳಣ್ ವಲಯ ಮೇಲ್ವಿಚಾರಕಿ ಭಾರತಿ, ಗ್ರಾಮಸ್ಥರಾದ ಗಣಪತಿ, ಸುರೇಶ್ ಮೂಲ್ಯ, ಪ್ರಭಾಕರ ಇನ್ನಾ, ದೀಪಕ್ ಕಾಮತ್, ರಮೇಶ್ ಮೂಲ್ಯ, ಲಕ್ಷ್ಮೀ ಕಾಂತ್ ರಾವ್, ಸುಜಾತ ಗಿರಿಯಪ್ಪ, ಅಪ್ಪಿ ಜೆ ಕರ್ಕೇರಾ ಉಪಸ್ಥಿತರಿದ್ದರು.
ಸಮಿತಿ ಕಾರ್ಯದರ್ಶಿ ದೀಪಕ್ ಕೋಟ್ಯಾನ್ ಸ್ವಾಗತಿಸಿದರು. ಶಿಕ್ಷಕರಾದ ರಾಜೇಂದ್ರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಹರೀಶ್ ಶೆಟ್ಟಿ ದಡ್ಡು ವಂದಿಸಿದರು.