ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ಮಾಚ್೯ 21 ಮತ್ತು 22 ರಂದು ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭ ಹಿಂದೂಯೇತರರಿಗೆ
ವ್ಯಾಪಾರಕ್ಕೆ ಅನುಮತಿ ನೀಡದಂತೆ ಪಡುಬಿದ್ರಿ ವಿಶ್ವಹಿಂದು ಪರಿಷತ್ ಬಜರಂಗದಳದ ಕಾರ್ಯಕರ್ತರು ದೇವಳದ ಕಾರ್ಯನಿರ್ವಹಣಾಧಿಕಾರಿ ಮತ್ತು ಅನುವಂಶಿಕ ಮೊಕ್ತೇಸರರಿಗೆ ಮನವಿ ನೀಡಿರುತ್ತಾರೆ.
ಕಾಪುವಿನಲ್ಲಿಯೂ ಮಾಚ್೯ 21 ಮತ್ತು 22 ರಂದು ಜರಗುವ ಮಾರಿಪೂಜೆಯಲ್ಲಿಯೂ
ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಕಾಪುವಿನ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಹೊಸ ಮಾರಿಗುಡಿಯ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ.