ಎರ್ಮಾಳು : ಕಾಪು ತಾಲೂಕಿನ ತೆಂಕ ಎರ್ಮಾಳು ಗ್ರಾಮದ ಬೀಚ್‌ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದಕ್ಕೆ ಕಳ್ಳರು ನುಗ್ಗಿ 1.40 ಮೌಲ್ಯದ ನಗ-ನಗದು ಕಳ್ಳತನಗೈದ ಘಟನೆ ನಡೆದಿದೆ.
ಬಾಡಿಗೆ ಮನೆಯಲ್ಲಿದ್ದು ಕೂಲಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟೆ ಮೂಲದ ದಂಪತಿಗಳಾದ ನಿಂಗವ್ವ ಮತ್ತು ಆಕೆಯ ಪತಿ ನಿನ್ನೆ ಬೆಳಿಗ್ಗೆ ಎಂದಿನಂತೆ ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗಿದ್ದರು. ಮಧ್ಯಾಹ್ನದ ವೇಳೆ ನಿಂಗವ್ವ ಅವರ ಗಂಡ ವಾಪಾಸ್ಸು ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಕಳ್ಳರು ಕಪಾಟಿನಲ್ಲಿದ್ದ 1,10,000 ರೂ. ನಗದು ಹಾಗೂ 30,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿಯ ಪೂಜಾ ಸಾಮಾಗ್ರಿಯನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.
ಈ ಬಗ್ಗೆ ನಿಂಗವ್ವ ಅವರು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.