ಮೂಳೂರು : ಬೈಕ್ - ಟ್ಯಾಂಕರ್ ಅಪಘಾತ ; ಓರ್ವ ಸಾವು, ಮತ್ತೋರ್ವ ಗಂಭೀರ
Posted On:
25-03-2023 06:19PM
ಮೂಳೂರು : ಕಾಪು ತಾಲೂಕಿನ ಮೂಳೂರಿನ
ವೆಸ್ಟ್ ಕೋಸ್ಟ್ ನರ್ಸರಿ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಪಲ್ಸರ್ ಬೈಕ್ ಮತ್ತು ಟ್ಯಾಂಕರ್ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆ ಸಾಗುತ್ತಿತ್ತು. ಹಿಂಬದಿಯಿಂದ ಬಂದ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ಕಾಪು ವೃತ್ತ ನಿರೀಕ್ಷಕ ಕೆ. ಸಿ ಪೂವಯ್ಯ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಭೇಟಿ ನೀಡಿದ್ದಾರೆ.