ಉಚ್ಚಿಲ : ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ 2 ಮಂದಿ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ, ಕಾಪು ತಾಲೂಕಿನ ಬಡಾ ಗ್ರಾಮದ ಉಚ್ಚಿಲದಲ್ಲಿ ಕೆವಿನ್ ಕುಲ್‌ದೀಪ್ ಮಜಲು ಮತ್ತು ಅಶ್ವಿನ್ ಪೂಜಾರಿ ಎಂಬುವವರು ಯಾವುದೋ ಅಮಲಿನಲ್ಲಿದ್ದವನಂತೆ ತೂರಾಡುತ್ತಿದ್ದು, ಯಾವುದೋ ಮಾದಕ ಪದಾರ್ಥ ಸೇವಿಸಿರಬಹುದು ಎಂದು ಅನುಮಾನಗೊಂಡು ಸದ್ರಿ ವ್ಯಕ್ತಿಗಳನ್ನು ವಶಕ್ಕೆ ಪಡೆದು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದಲ್ಲಿ
ತಪಾಸಣೆಗೊಳಪಡಿಸಿದ್ದು, ಮಾದಕ ವಸ್ತುವಾದ ಗಾಂಜಾ ಸೇವಿಸಿರುವುದು ದೃಢಪಟ್ಟಿರುತ್ತದೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ 2 ಪ್ರಕರಣ ದಾಖಲಾಗಿದೆ.