ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹೆಜಮಾಡಿ : ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆಗಳಿಲ್ಲದ 5 ಲಕ್ಷ ರೂಪಾಯಿ ಪೋಲಿಸ್ ವಶಕ್ಕೆ

Posted On: 27-03-2023 06:07PM

ಹೆಜಮಾಡಿ : ಇಲ್ಲಿನ ಚೆಕ್ ಪೋಸ್ಟ್ ಬಳಿ ಪೋಲಿಸ್ ತಪಾಸಣೆ ವೇಳೆ‌ ಯಾವುದೇ ದಾಖಲೆಗಳಿಲ್ಲದ 5 ಲಕ್ಷ ನಗದನ್ನು ಕಾರೊಂದರಿಂದ ವಶಪಡಿಸಲಾಗಿದೆ.

ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣಾ ಸಂಬಂದ ನಿಗಾ ವಹಿಸಲು ವಾಹನ ತಪಾಸಣೆ ಕರ್ತವ್ಯಕ್ಕೆ ನೇಮಿಸಿದಂತೆ ಕರ್ತವ್ಯದಲ್ಲಿರುವಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಚಾಲಕನ ಎಡ ಬದಿಯ ಟೂಲ್ಸ್ ಬಾಕ್ಸ್ ಒಳಗಡೆ ಒಂದು ಕೇಸರಿ ಬಣ್ಣದ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ಬಂಟ್ವಾಳ ತಾಲೂಕು, ಪ್ರಸಾದ ಎಂಬ ನೀಲಿ ಬಣ್ಣ  ಪ್ರಿಂಟ್ ಇರುವ ಕೈ ಚೀಲ ಇದ್ದು ಅದನ್ನು ಪರಿಶೀಲಿಸಿದಾಗ ಅದರೊಳಗೆ 500 ರೂಪಾಯಿ ಮುಖ ಬೆಲೆಯ ಭಾರತೀಯ ಕರೆನ್ಸಿ ನೋಟುಗಳಿರುವ ಒಟ್ಟು ಸೇರಿಸಿ ಬಂಡಲ್ ಮಾಡಿ ಇಟ್ಟಿರುವ ಹಣ ಕಂಡು ಬಂದಿದ್ದು, ಈ ಹಣದ ಕುರಿತು ಕಾರಿನ ಚಾಲಕ ಅಹಮ್ಮದ್ ಕಬೀರ್ ಹಾಗೂ ಕಾರಿನಲ್ಲಿ ಇದ್ದ ಅಬ್ದುಲ್ ಖಾದರ್ ಜೈಲಾನಿ ಎಂಬುವರನ್ನು ವಿಚಾರಿಸಿದಾಗ. ಈ ಹಣದ ಬಗ್ಗೆ ಯಾವುದೇ ದಾಖಲಾತಿಗಳನ್ನು ಹಾಜರುಪಡಿಸದ ಕಾರಣ ರೂಪಾಯಿ 5,00,000/- ಮತ್ತು ಕಾರನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. 

ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.