ಕಾಪು : ಇಲ್ಲಿನ ಬಿಲ್ಲವರ ಸಹಾಯಕ ಸಂಘದಲ್ಲಿ ಮಾರ್ಚ್ 31 ರಿಂದ ಎಪ್ರಿಲ್ 2ರವರೆಗೆ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೂತನವಾಗಿ ನಿರ್ಮಿಸಿದ ಶಿಲಾಮಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಮೂರ್ತಿ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶಾಭಿಷೇಕದ ಕಾರ್ಯಕ್ರಮಗಳು ಜರಗಲಿವೆ.
ಈ ನಿಮಿತ್ತ ಇಂದು ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಿಂದ ಶ್ರೀ ವಿಠೋಭ ರುಕುಮಾಯಿ ದೇವರ ರಜತ ಕವಚ ಮತ್ತು ಪ್ರಭಾವಳಿ, ಶ್ರೀ ಗುರುದೇವರ ರಜತ ಪಾದುಕೆ, ಹಸಿರು ಹೊರೆ ಕಾಣಿಕೆ ಮೆರವಣಿಗೆ ಜರಗಿತು.
ಕರದಾಳ ಕಲಬುರ್ಗಿಯ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮೀಜಿ
ಚಾಲನೆ ನೀಡಿದರು.
ಕ್ಷೇತ್ರದಲ್ಲಿ ಬೆಳಿಗ್ಗೆ ಗಂಟೆ 7:30 ರಿಂದ ಭದ್ರದೀಪ ಪ್ರಜ್ವಲನೆ, ಆಚಾರ್ಯ ವರ್ಣಕ್ರಿಯೆ, ಸ್ವಸ್ತಿ ಪುಣ್ಯಾಹ ವಾಚನ, ಗಣಹೋಮ, ಸಪ್ತಶುದ್ಧಿ, ತೋರಣ ಮುಹೂರ್ತ, ಮೂರ್ತಿ ಸಂಸ್ಕಾರ ನಡೆಯಿತು. ಸಂಜೆ ಗಂಟೆ 6ರಿಂದ ವಾಸ್ತುಹೋಮ, ವಾಸ್ತು ಬಲಿ, ರಾಕ್ಷೋಘ್ನ ಹೋಮ, ಪ್ರಸಾದ ಶುದ್ಧಿ, ಚಕ್ರಾಬ್ಜ ಮಂಡಲ ಪೂಜೆ ಜರಗಲಿವೆ.