ಸ್ಟೇಟಸ್ ಕತೆಗಳ ಮೂಲಕ ಗಮನ ಸೆಳೆಯತ್ತಿರುವ ಉಪನ್ಯಾಸಕ ಧೀರಜ್ ಬೆಳ್ಳಾರೆ
Posted On:
03-04-2023 04:35PM
ಕೊರೋನಾ ಸಮಯ ಒಂದಷ್ಟು ಪ್ರತಿಭೆಗಳು ಬೆಳಕಿಗೆ ಬಂದದ್ದಂತು ನಿಜ. ಎಲ್ಲಾ ಸ್ತಬ್ಧವಾಗಿದ್ದರೂ ಕತೆ, ಕವನ, ನೃತ್ಯ, ಮಾತು ಇತ್ಯಾದಿ ಚಟುವಟಿಕೆಗಳಿಗೆ ಕೊರತೆ ಇರಲಿಲ್ಲ. ಪ್ರತಿನಿತ್ಯದ ಬಿಝಿಗಳ ನಡುವೆ ಮೊಬೈಲ್ ನಲ್ಲಿ ಕಾಲ ಕಳೆಯುವ ಈ ಕಾಲಘಟ್ಟದಲ್ಲಿ ವಾಟ್ಸಾಪ್ ಸ್ಟೇಟಸ್ ಕತೆಗಳ ಮೂಲಕ ಗಮನ ಸೆಳೆದ ವ್ಯಕ್ತಿ ಧೀರಜ್ ಬೆಳ್ಳಾರೆ.
ವೃತ್ತಿಯಲ್ಲಿ ಉಪನ್ಯಾಸಕ, ಪ್ರವೃತ್ತಿಯಲ್ಲಿ ಲೇಖಕ, ವಾಗ್ಮಿ, ನಟರಾಗಿ ಗುರುತಿಸಿರುವ ಇವರು ತಮ್ಮ ಸ್ಟೇಟಸ್ ಸಾಹಿತ್ಯದ ಮೂಲಕ ಹಲವಾರು ಜನರ ವಾಟ್ಸಾಪ್ ಸ್ಟೇಟಸ್ ಅಲಂಕರಿಸಿದ್ದಾರೆ.
ಕೊರೊನ ಸಮಯದಲ್ಲಿ ಇವರ ಬರಹದ ಆರಂಭವು ಒಂದು ಸಾವಿರ ಕತೆಗಳನ್ನು ದಾಟಿ ಇಂದಿಗೆ ಒಂದು ಸಾವಿರದ ಮೂರನೆಯ ಕತೆಯವರೆಗೆ ತಲುಪಿ ಇನ್ನೂ ಮುಂದುವರಿಯಲಿದೆ. ತಾನೂ ಬರೆಯುವುದಲ್ಲದೆ ಇತರರ ಬರವಣಿಗೆಗೆ ಸ್ಫೂರ್ತಿದಾತರಾಗಿದ್ದಾರೆ.
ತಾನು ಬರೆದ ಸಾವಿರ ಕತೆಗಳಲ್ಲಿ ಆಯ್ದ ನೂರು ಕತೆಗಳನ್ನು ಆರಿಸಿ ಸ್ಟೇಟಸ್ ಕತೆಗಳು ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಪ್ರಸ್ತುತ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ಕತೆ, ಲೇಖನದ ಕಾರ್ಯ ಮುಂದುವರಿಯಲಿ. ಜನರಲ್ಲಿ ಇಂತಹ ಕತೆಗಳ ಮೂಲಕ ಓದುವಿಕೆಯು ಚಿಗುರೊಡೆಯಲಿ ಎಂದು ಆಶಿಸೋಣ.