ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ : ಅಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್ಗಳ ತೆರವಿಗೆ ಸೂಚನೆ

Posted On: 03-04-2023 07:44PM

ಉಡುಪಿ : ರಾಜ್ಯ ವಿಧಾನಸಭೆ ಚುನಾವಣೆ - 2023 ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ, ಜಿಲ್ಲೆಯ ಎಲ್ಲಾ ಆಟೋರಿಕ್ಷಾಗಳಲ್ಲಿ ರಾಜಕೀಯ ಸಂಬಂಧಿತ ಪೋಸ್ಟರ್ಗಳನ್ನು ತೆರವುಗೊಳಿಸಬೇಕು ಮತ್ತು ಯಾವುದೇ ರೀತಿಯ ರಾಜಕೀಯ ಸಂಬಂಧಿತ ಪೋಸ್ಟರ್ಗಳನ್ನು ಅಳವಡಿಸದಂತೆ ಆಟೋರಿಕ್ಷಾ ಚಾಲಕರು ಹಾಗೂ ಮಾಲಕರು ಕ್ರಮಕೈಗೊಳ್ಳಬೇಕು.

ತಪ್ಪಿದ್ದಲ್ಲಿ ಅಂತಹ ವಾಹನಗಳ ಪರವಾನಿಗೆಯನ್ನು ರದ್ದುಗೊಳಿಸಿ, ಎಫ್.ಐ.ಆರ್ ದಾಖಲಿಸಲು ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.