ಕಾಪು : ಬ್ರಹ್ಮಶ್ರೀ ನಾರಾಯಣಗುರುಗಳು ಸಾಮಾಜಿಕ ಕ್ರಾಂತಿ ನಡೆಸಿ, ಜನರನ್ನು ಒಗ್ಗೂಡಿಸಿದ ಮಹಾನ್ ದಾರ್ಶನಿಕ - ವಿಖ್ಯಾತಾನಂದ ಸ್ವಾಮೀಜಿ
Posted On:
04-04-2023 08:53PM
ಕಾಪು : ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಸ್ತ ಹಿಂದೂ ಸಮಾಜದ ಏಳಿಗೆಗಾಗಿ ಸಾಮಾಜಿಕ ಕ್ರಾಂತಿಯನ್ನು ನಡೆಸಿ, ಜನರನ್ನು ಒಗ್ಗೂಡಿಸಿದ ಮಹಾನ್ ದಾರ್ಶನಿಕರು. ಅವರ ಹೆಸರಿನಲ್ಲಿ ಮುನ್ನಡೆಯುತ್ತಿರುವ ಸಂಘ ಸಂಸ್ಥೆಗಳು ಮತ್ತು ಗುರು ಮಂದಿರಗಳ ಮೂಲಕವಾಗಿ ಸಮಾಜದ ಯುವಜನರನ್ನು ಶೈಕ್ಷಣಿಕವಾಗಿ ಉನ್ನತ ಮಟ್ಟದವರೆಗೆ ಕೊಂಡೊಯ್ಯುವ ಪ್ರಯತ್ನಗಳು ನಡೆಯಬೇಕಿವೆ ಎಂದು ಕರ್ನಾಟಕ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.
ಅವರು ಎಪ್ರಿಲ್ 2 ರಂದು ಕಾಪು ಬಿಲ್ಲವರ ಸಹಾಯಕ ಸಂಘದ ನವೀಕೃತ ಶಿಲಾಮಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಮೂರ್ತಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಆಶೀವರ್ಚನ ನೀಡಿದರು.
ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಸೂರ್ಯಕಾಂತ್ ಜೆ. ಪೂಜಾರಿ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಮುಂಬಯಿ ಬಿಲ್ಲವ ಚೇಂಬರ್ಸ್ ಆಫ್ ಕಾಮರ್ಸ್ ಕಾರ್ಯಾಧ್ಯಕ್ಷ ಎನ್. ಟಿ. ಪೂಜಾರಿ, ಕಾಪು ಸಿ.ಎ. ಬ್ಯಾಂಕ್ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಮುಂಬೈಯ ಉದ್ಯಮಿ ಉಮೇಶ್ ಕಾಪು, ಕಾಪು ಪುರಸಭೆ ಸದಸ್ಯೆ ಸರಿತಾ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು.
ಸಂಘದ ಮಾಜಿ ಅಧ್ಯಕ್ಷ ಮಾಧವ ಆರ್. ಪಾಲನ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರ, ವಾಸ್ತುತಜ್ನ ತ್ರಿವಿಕ್ರಮ ಭಟ್, ಶಿಲ್ಪಿಗಳಾದ ನರಸಿಂಹ ಆಚಾರ್ಯ, ಸುಧಿರ್ ಆಚಾರ್ಯ, ಇಂಜಿನಿಯರ್ ಶಶಿಧರ್ ಸುವರ್ಣ, ವೇಣುಕೃಷ್ಣ, ರಾಘು ಪೂಜಾರಿ ಕಲ್ಮಂಜೆ ಹಾಗೂ ಇಪ್ಪತ್ತೈದು ಸಾವಿರ ಮೇಲ್ಪಟ್ಟು ಧನಸಹಾಯ ನೀಡಿದ ದಾನಿಗಳು, ಮಂದಿರದ ವಿವಿಧ ಕಾಮಗಾರಿಗಳ ವೆಚ್ಚವನ್ನು ಭರಿಸಿದ ದಾನಿಗಳನ್ನು ಸಮ್ಮಾನಿಸಿ, ಗೌರವಿಸಲಾಯಿತು.
ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಅರ್ಚಕ ಚರಣ್ ಶಾಂತಿ ಕಟಪಾಡಿ, ಮಹೇಶ್ ಶಾಂತಿ ಹೆಜಮಾಡಿ, ಗೌ. ಪ್ರ. ಕಾರ್ಯದರ್ಶಿ ವಿಠಲ ಬಿ. ಸಾಲ್ಯಾನ್, ಉಪಾಧ್ಯಕ್ಷರಾದ ಐತಪ್ಪ ಎಸ್. ಕೋಟ್ಯಾನ್, ಸಖೇಂದ್ರ ಸುವರ್ಣ, ಮಧು ಪಾಲನ್, ಕೋಶಾಽಕಾರಿ ಉದಯ ಸನಿಲ್, ಮಹಿಳಾ ಬಳಗದ ಸಂಚಾಲಕಿ ಆಶಾ ಶಂಕರ್, ದಳಪತಿ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು ಸ್ವಾಗತಿಸಿ, ಜತೆ ಕಾರ್ಯದರ್ಶಿ ಅನಿಲ್ ಕುಮಾರ್ ವಂದಿಸಿದರು. ಸಚ್ಚೇಂದ್ರ ಅಂಬಾಗಿಲು ಕಾರ್ಯಕ್ರಮ ನಿರೂಪಿಸಿದರು.