ಬಂಟಕಲ್ಲು : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿಯಾದ ರೆನಿಟಾ ಶರೋನ್ ಮೋನಿಸ್ ಇವರು ಎಮ್.ಐ.ಟಿ.ಇ ತಾಂತ್ರಿಕ ಮಹಾವಿದ್ಯಾಲಯ, ಮೂಡುಬಿದ್ರಿ, ಮಂಗಳೂರು ಇಲ್ಲಿಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿಯಾದ ಡಾ. ಆಶಾ ಕ್ರಾಸ್ಟಾ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ಎಸ್ಟಿಮೇಟ್ ಆಫ್ ಅನ್‌ಸ್ಟಡಿ ಸ್ಟೆಬಿಲಿಟಿ ಡಿರೈವೆಟೀಸ್ ಫಾರ್ ಡೆಲ್ಟಾ ವಿಂಗ್ಸ್ ಇನ್ ಹೈ ಸ್ಪೀಡ್ ಫ್ಲೋ ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಪ್ರಾಧ್ಯಾಪಕಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.