ಉಡುಪಿ : ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ
ಯಶ್‌ಪಾಲ್ ಎ. ಸುವರ್ಣರನ್ನು ಬಿಜೆಪಿ ಪಕ್ಷ ಆಯ್ಕೆ ಮಾಡಿದೆ.
ಉಡುಪಿ ನಗರಸಭೆಯಲ್ಲಿ 3 ಬಾರಿ ಅಜ್ಜರಕಾಡು ವಾರ್ಡಿನಿಂದ ಸದಸ್ಯರಾಗಿ ಸೇವೆ, ಉಡುಪಿ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ದುಡಿದ ಅನುಭವ, ರಾಜ್ಯ ಬಿಜೆಪಿ ಯುವ ಮೋರ್ಚ ರಾಜ್ಯ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದು, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಬಿಜೆಪಿ ಸಹಕಾರಿ ಹಾಗೂ ಮೀನುಗಾರಿಕಾ ಪ್ರಕೋಷ್ಟದ ಸದಸ್ಯರಾಗಿ,
ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಟದ ರಾಜ್ಯ ಸಂಚಾಲಕರಾಗಿ, ಪ್ರಸ್ತುತ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅನುಭವದ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರ, ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.
ಬಿಜೆಪಿ ಪಕ್ಷದ ಪ್ರಮುಖರಾದ ಅರುಣ್ ಸಿಂಗ್ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಇವರ ಆಯ್ಕೆಯನ್ನು ಘೋಷಿಸಿದರು.