ಕಾಪು : ಇಲ್ಲಿನ ಪುರಸಭೆಯ ಮಾಜಿ ಸದಸ್ಯ ನಾಗೇಶ್ ಸುವರ್ಣ (54) ಅವರು ಮಂಗಳವಾರ ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ನಿಧನರಾದರು.
ಕಾಪು ಪುರಸಭೆಯ ನಾಮ ನಿರ್ದೇಶಿತ ಸದಸ್ಯರಾಗಿದ್ದ ಅವರು, ಕಾಪು ಗ್ರಾ.ಪಂ. ಸದಸ್ಯ, ಯುವವಾಹಿನಿ ಕಾಪು ಘಟಕದ ಸ್ಥಾಪಕಾಧ್ಯಕ್ಷ, ಕಾಪು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ, ಗರೋಡಿ ಸೇವಾ ಯುವ ಸಮಿತಿ ಅಧ್ಯಕ್ಷ, ಪಡು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಕಾರ್ಯದರ್ಶಿ, ಕಾಪು ಬಿಲ್ಲವರ ಸಹಾಯಕ ಸಂಘದ ಜತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಮೃತರು ತಾಯಿ ಮತ್ತು ಪತ್ನಿಯನ್ನು ಅಗಲಿದ್ದಾರೆ.
ನಾಗೇಶ್ ಸುವರ್ಣರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.