ಬೆಳಪು : ಇಲ್ಲಿ ಕಾಂಗ್ರೆಸ್ ಸ್ಥಾನೀಯ ಸಮಿತಿಯ ಚುನಾವಣಾ ಕಛೇರಿಯನ್ನು ಇಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಚುನಾವಣೆಗೆ ಅಣಿಗೊಳ್ಳುವ ನಿಟ್ಟಿನಲ್ಲಿ ಬೆಳಪು ಭಾಗದಲ್ಲಿ ಗ್ರಾಮೀಣ ಕಾಂಗ್ರೆಸ್ ಕಚೇರಿಯನ್ನು ಪ್ರಾರಂಭಿಸಲಾಗಿದೆ. ಏಪ್ರಿಲ್ 18ರಂದು ನಾಮಪತ್ರ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಬೆಳಿಗ್ಗೆ 10 ಗಂಟೆಗೆ ಜನಾರ್ಧನ ದೇವಸ್ಥಾನದಿಂದ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಕಾಪು ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಿ ಮಧ್ಯಾಹ್ನ 12ಗಂಟೆಯ ನಂತರ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು.
ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರಾದ ದೇವಿ ಪ್ರಸಾದ್ ಶೆಟ್ಟಿ, ದಿವಾಕರ ಶೆಟ್ಟಿ, ಸುನಿಲ್ ಬಂಗೇರ, ಶೇಖರ ಹೆಜ್ಮಾಡಿ, ಜಿತೇಂದ್ರ ಫುಟಾರ್ಡೊ, ಶೇಖಬ್ಬ, ಝಾಹಿರ್, ಗುಲಾಂ, ಹರೀಶ್ ನಾಯಕ್, ಸೆಲ್ವ, ಸತೀಶ್, ಮುಸ್ತಾಕ್, ಮನ್ಸೂರ್, ದೀಪಕ್ ಕುಮಾರ್ ಎರ್ಮಾಳ್
ಮತ್ತಿತರರು ಉಪಸ್ಥಿತರಿದ್ದರು.