ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮೋದಿಯವರ ಯೋಜನೆ, ಯೋಚನೆ ಮತ್ತು ಶಾಸಕ ಲಾಲಾಜಿ ಮೆಂಡನ್ ರ ಅಭಿವೃದ್ಧಿ ಕೆಲಸಗಳೇ ಗೆಲುವಿಗೆ ಶ್ರೀರಕ್ಷೆ : ಸುರೇಶ್ ಶೆಟ್ಟಿ ‌ಗುರ್ಮೆ

Posted On: 15-04-2023 07:47PM

ಕಾಪು : ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿದೆ. ಎಪ್ರಿಲ್ 17, ಸೋಮವಾರ ಬೆಳಗ್ಗೆ 10 ಗಂಟೆಗೆ ಕಾಪು ಜನಾರ್ಧನ ದೇವಸ್ಥಾನದಿಂದ ಸುಮಾರು 25,000 ಜನರ ಸೇರುವಿಕೆಯೊಂದಿಗೆ ಪಾದಯಾತ್ರೆ ಮೂಲಕ ಕಾಪು ತಾಲೂಕು ಕಛೇರಿಗೆ ಸಾಗಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ‌ಗುರ್ಮೆ ಹೇಳಿದರು. ಅವರು ಕಾಪುವಿನಲ್ಲಿ ಜರಗಿದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ನಾಮಪತ್ರಿಕೆ ಸಲ್ಲಿಕೆಯಂದು ಅಣ್ಣಾಮಲೈ, ಸುನಿಲ್ ಕುಮಾರ್, ಕೋಟ ಶ್ರೀನಿವಾಸ ‌ಪೂಜಾರಿ, ಲಾಲಾಜಿ‌‌ ಮೆಂಡನ್, ರಘುಪತಿ ಭಟ್, ಯಶ್ಪಾಲ್ ಸುವರ್ಣ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿಯ ಯೋಜನೆ, ಯೋಚನೆಯ ಜೊತೆಗೆ ಸ್ಥಳೀಯವಾಗಿ ಶಾಸಕರಾದ ಲಾಲಾಜಿ‌ ಮೆಂಡನ್ ರವರ ಐದು ವರ್ಷಗಳಲ್ಲಿ ಮೂರು ಸಾವಿರ ಕೋಟಿ ಅನುದಾನ ಕ್ಷೇತ್ರಕ್ಕೆ ತಂದಿದ್ದಾರೆ. ನಮ್ಮ ಚುನಾವಣೆಗೆ ಇದು ಶ್ರೀರಕ್ಷೆಯಾಗಲಿದೆ. ಮುಂದೆ ಹಲವಾರು ಕನಸುಗಳಿವೆ ಎಂದರು.

ಈ ಸಂದರ್ಭ ಮಾತನಾಡಿದ ಶಾಸಕ ಲಾಲಾಜಿ ಮೆಂಡನ್ ಪಕ್ಷ 6 ಬಾರಿ ಸ್ಪರ್ಧಿಸಲು ಅವಕಾಶ ನೀಡಿ 3 ಬಾರಿ ಶಾಸಕನಾಗಿ ಆಯ್ಕೆಯಾಗಿ ಮೂರು ಸಾವಿರಕ್ಕೂ ಮಿಕ್ಕಿ ಅನುದಾನದ ಕಾರ್ಯಯೋಜನೆಗಳಾಗಿವೆ. ಸುರೇಶ್ ಶೆಟ್ಟಿ ಗುರ್ಮೆಯವರು ಶಾಸಕನಾಗಿ ಆಯ್ಕೆಯಾಗಿ ಹಲವಾರು ರೀತಿಯ ಅಭಿವೃದ್ಧಿಯಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ದೆಹಲಿ ವಿಧಾನಸಭಾ ಶಾಸಕ ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ ವಿಜೇಂದರ್ ಗುಪ್ತ, ಶಾಸಕರಾದ ಲಾಲಾಜಿ ಮೆಂಡನ್, ಮಟ್ಟಾರ್ ರತ್ನಾಕರ್ ಹೆಗ್ಡೆ, ಕಾಪು ಕ್ಷೇತ್ರದ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹಿರಿಯರಾದ ಗಂಗಾಧರ್ ಸುವರ್ಣ, ಗೀತಾಂಜಲಿ ಸುವರ್ಣ ಮತ್ತು ಶಿಲ್ಪಾ ಜಿ ಸುವರ್ಣ ಉಪಸ್ಥಿತರಿದ್ದರು.