ಕಾಪು : ಇಲ್ಲಿನ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಇಂದು ಕುರ್ಕಾಲು, ಇನ್ನಂಜೆ ಮಲ್ಲಾರು, ಕಟಪಾಡಿ, ಮಜೂರು, ಎಲ್ಲೂರು, ಕೋಟೆ ಗ್ರಾಮೀಣ ಕಾಂಗ್ರೆಸ್ ಸಮಿತಿಗಳಿಗೆ ಭೇಟಿ ನೀಡಿ, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ನಾಮಪತ್ರ ಸಲ್ಲಿಸುವ ಬಗ್ಗೆ ಕಾರ್ಯಕರ್ತರ ಹಾಗೂ ಪಕ್ಷದ ಹಿತೈಷಿಗಳಲ್ಲಿ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿನಂತಿ ಮಾಡಿಕೊಂಡರು.
ಈ ಸಂದರ್ಭ ಡಾ. ದೇವಿ ಪ್ರಸಾದ ಶೆಟ್ಟಿ, ಜಿತೇಂದ್ರ ಪೂಟಾರ್ಡೋ, ನವೀನ್ ಚಂದ್ರ ಜೆ ಶೆಟ್ಟಿ, ದಿವಾಕರ್, ಸುರೇಶ್ ಪೂಜಾರಿ ಕೂರ್ಕಾಲು, ನವೀನ್ ಚಂದ್ರ ಸುವರ್ಣ ಅಡ್ವೆ, ವೈ ಸುಕುಮಾರ್, ದೇವಪುತ್ರ ಕೋಟ್ಯಾನ್, ರಾಜೇಶ್ ರಾವ್ ,ಶ್ರೀಕರ್ ಅಂಚನ್, ಅಶೋಕ್ ರಾವ್ ಕಟ್ಪಾಡಿ ,ಅಬ್ದುಲ್ ಅಜೀಜ್, ನಯೀಮ್ ಕಟಪಾಡಿ, ಅಖಿಲೇಶ್ ಕೋಟ್ಯಾನ್, ಪ್ರಭಾಕರ್ ಆಚಾರ್ಯ, ಅಬೂಬಕರ್ ಕಟಪಾಡಿ, ಮಹೇಶ್ ಶೆಟ್ಟಿ ಬಿಳಿಯಾರು ಮುಂತಾದವರು ಉಪಸ್ಥಿತರಿದ್ದರು.