ಎಪ್ರಿಲ್ 16 - 30 : ಗ್ರ್ಯಾವಿಟಿ ಡ್ಯಾನ್ಸ್ ಕ್ರೀವ್ ವತಿಯಿಂದ ಸಮ್ಮರ್ ಕ್ಯಾಂಪ್ ದಮಾಕ
Posted On:
15-04-2023 11:10PM
ಕಾಪು : ಗ್ರ್ಯಾವಿಟಿ ಡ್ಯಾನ್ಸ್ ಕ್ರೀವ್ ಇವರ ವತಿಯಿಂದ ನೆರವೇರಲಿರುವ ಸಮ್ಮರ್ ಕ್ಯಾಂಪ್ ದಮಾಕ ಎಪ್ರಿಲ್ 16ರಿಂದ ಎಪ್ರಿಲ್ 30ರವರೆಗೆ ನಡೆಯಲಿದೆ.
ಇದರ ವತಿಯಿಂದ ಮಕ್ಕಳಿಗೆ ಹಲವಾರು ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಡ್ಯಾನ್ಸ್:- ವಿನೂತನ ನೃತ್ಯ ಭಂಗಿಗಳು,ಮುಖದಲ್ಲಿ ನೃತ್ಯದ ಭಾವನೆಗಳನ್ನು ಹೇಗೆ ವ್ಯಕ್ತಪಡಿಸಬಹುದು ಎಂದು ಮಕ್ಕಳಿಗೆ ತಿಳಿಸಿ ಕೊಡಲಾಗುತ್ತದೆ.
ಚಿತ್ರಕಲೆ:- ಹಲವಾರು ಶ್ಯೆಲಿಯ ಚಿತ್ರಕಲೆಯ ಸೊಬಗನ್ನು ಮಕ್ಕಳಿಗೆ ತಿಳಿಸಿಕೊಡಲಾಗುವುದು.
ಅಭಿನಯ:- ಖ್ಯಾತ ಕಲಾವಿದರಿಂದ ಅಭಿನಯದ ಸ್ಪರ್ಶವನ್ನು ಮಕ್ಕಳಿಗೆ ಹೇಳಿಕೊಡಲಾಗುವುದು.
ಸ್ಪರ್ಧೆ:- ಮಕ್ಕಳಿಗೆ ವಿವಿಧ ರೀತಿಯ ಸ್ಪರ್ಧೆಯೊಂದಿಗೆ ಮನೋರಂಜಿಸಲಾಗುವುದು.