ಪಡುಬಿದ್ರಿ : ಇಲ್ಲಿನ ಬಿಜೆಪಿ ಮಹಾ ಶಕ್ತಿ ಕೇಂದ್ರದ
ಚುನಾವಣಾ ಕಾರ್ಯಾಲಯ ಇಂದು ಕಾಪು ವಿಧಾನಸಭಾ ಬಿಜೆಪಿ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಶಾಸಕ ಲಾಲಾಜಿ ಆರ್ ಮೆಂಡನ್ ಜೊತೆಗೂಡಿ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ಲಾಲಾಜಿ ಆರ್ ಮೆಂಡನ್ ಸರ್ವರು ಒಗ್ಗೂಡಿ ಈ ಚುನಾವಣೆಯಲ್ಲಿ ಗುರ್ಮೆಯವರನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸೋಣ ಎಂದರು.
ಕಾಪು ವಿಧಾನಸಭಾ ಬಿಜೆಪಿ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಚುನಾವಣೆಯಲ್ಲಿ ಗೆಲ್ಲಲು ಕಾರ್ಯಕರ್ತರ ಬೆಂಬಲ ಅನಿವಾರ್ಯ. ನಿಮ್ಮ ಸಹಕಾರದಿಂದ ಮುಂದಿನ ಸಮಯದಲ್ಲಿ ಪ್ರಚಾರ ಕಾರ್ಯ ನಡೆಯಲಿ. ನನ್ನ ಗೆಲುವು, ಪಕ್ಷದ ಅಸ್ತಿತ್ವ ನಿಮ್ಮ ಕೈಯಲ್ಲಿದೆ. ಈ ಬಾರಿ ಭಾರತೀಯ ಜನತಾ ಪಕ್ಷ, ಧರ್ಮ, ಸಂಸ್ಕೃತಿ ಗೆಲ್ಲಿಸೋಣ ಎಂದರು.
ಈ ಸಂದರ್ಭ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ, ಪಡುಬಿದ್ರಿ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪಡುಬಿದ್ರಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ಹಾಗೂ ಪಕ್ಷದ ಪ್ರಮುಖರಾದ ಮಿಥುನ್ ಹೆಗ್ಡೆ, ಹರೀಶ್ ಶೆಟ್ಟಿ ಮುಂಬಯಿ, ನೀತಾ ಗುರುರಾಜ್, ಕೇಶವ ಮೊಯ್ಲಿ, ಗಾಯತ್ರಿ ಪ್ರಭು , ಸೌಮ್ಯಲತಾ ಶೆಟ್ಟಿ, ಜಯಶ್ರೀ ತೆಂಕ , ಯಶೋದ ಹಾಗೂ ಇನ್ನಿತರ ಪ್ರಮುಖರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.