ಪಡುಬಿದ್ರಿ : ಕಂಚಿನಡ್ಕದಲ್ಲಿ ಬಿಜೆಪಿ ಸೇರ್ಪಡೆ, ಕಾರ್ಯಕರ್ತರ ಸಭೆ
Posted On:
24-04-2023 10:55PM
ಪಡುಬಿದ್ರಿ : ಇಲ್ಲಿನ ಗ್ರಾ.ಪಂ ವ್ಯಾಪ್ತಿಯ ಕಂಚಿನಡ್ಕದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ಸೋಮವಾರ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮತ್ತು ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಉಪಸ್ಥಿತಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾ.ಪಂ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಕು. ನಯನ ಕಂಚಿನಡ್ಕ, ಸಾಮಾಜಿಕ ಕಾರ್ಯಕರ್ತೆ ಶಶಿ ಕಂಚಿನಡ್ಕ ಮೊದಲಾದವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.