ಉಚ್ಚಿಲ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲಕ್ಕೆ ಎಪ್ರಿಲ್ 27 ರಂದು ಬರಲಿದ್ದು ಮೀನುಗಾರರ ಸಮಾವೇಶ ಅವರ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಸಭೆ ಸಂವಾದ ಕಾರ್ಯಕ್ರಮವು ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಜಿ ಶಂಕರ್ ಸಭಾಂಗಣದಲ್ಲಿ ನಡೆಯಲಿದೆ. ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಸಭೆ ಸಂವಾದ ನಡೆಯುವ ಸ್ಥಳವನ್ನು ಎಸ್ ಪಿ ಅಕ್ಷಯ್ ಮಚ್ಛಿಂದ್ರ ತಂಡ ಪರಿಶೀಲನೆ ನಡೆಸಿದರು.
ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಅಶೋಕ್‌ಕುಮಾರ್ ಕೊಡವೂರು, ಮಂಜುನಾಥ ಸುಣೇಗಾರ್, ಹರೀಶ್ ಕಿಣಿ, ಜಿತೇಂದ್ರ ಪುಟಾರ್ಡೋ, ಅಖಿಲೇಶ್ ಕೋಟ್ಯಾನ್, ಶರ್ಪುದ್ದೀನ್ ಶೇಖ್, ವಿಶ್ವಾಸ್ ಅಮೀನ್, ಸತೀಶ್ ಅಮೀನ್, ರೋಶನ್, ಸಂತೋಷ್ ಪಡುಬಿದ್ರಿ, ಶೇಖರ ಹೆಜ್ಮಾಡಿ, ದೀಪಕ್ ಎರ್ಮಾಳ್ ಉಪಸ್ಥಿತರಿದ್ದರು.