ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ವಿವಿದೆಡೆ ಮತಯಾಚನೆ
Posted On:
26-04-2023 06:35PM
ಕಾಪು : ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಶಾಸಕ ಲಾಲಾಜಿ ಮೆಂಡನ್ ಜೊತೆಗೂಡಿ ತೆಂಕ ಗ್ರಾಮ ಪಂಚಾಯತ್, ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ಮಾಡಿ ಮತಯಾಚಿಸಿದರು.
ಈ ಸಂದರ್ಭ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಯಡಿಯೂರಪ್ಪ ಹಾಗು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಮಾಡಿದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡಿದರು. ಸರಕಾರ ಒದಗಿಸುತ್ತಿರುವ ಸವಲತ್ತುಗಳು ಅರ್ಹರನ್ನು ತಲುಪುತ್ತಿರುವ ಬಗೆಯನ್ನು ವಿವರಿಸಿದರಲ್ಲದೆ ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಗಳಿಸುವಂತಾಗಲು ತಮಗೆ ಮತ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭ ಗ್ರಾಮ ಪಂಚಾಯತಿ ಸದಸ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತಿಯಿದ್ದರು.