ಕಾಪು : ಇಲ್ಲಿನ ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ರಾಶಿ ಪೂಜಾ ಮಹೋತ್ಸವವು ಬ್ರಹ್ಮಶ್ರೀ ವೇ|ಮೂ| ಕಲ್ಯ ಶ್ರೀ ಅನಂತರಾಮ ತಂತ್ರಿಯವರ ಮಾರ್ಗದರ್ಶನದಲ್ಲಿ ಮತ್ತು ಬ್ರಹ್ಮಶ್ರೀ ವೇ|ಮೂ| ಶ್ರೀ ಪಂಜ ಭಾಸ್ಕರ ಭಟ್ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಬ್ರಹ್ಮಶ್ರೀ ವೇ|ಮೂ| ಕೊರಂಗ್ರಪಾಡಿ ಶ್ರೀ ಶ್ರೀನಿವಾಸ ತಂತ್ರಿಗಳ ಸಹಕಾರದೊಂದಿಗೆ ಸಂಪನ್ನಗೊಂಡಿತು.
ಈ ಸಂದರ್ಭ ದೇವಳದ ಕಾರ್ಯನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ, ಆಡಳಿತಾಧಿಕಾರಿ ಗಣೇಶ್ ರಾವ್, ರಾಶಿ ಪೂಜಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರುಗಳು, ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಸಮಿತಿಯ ಉಪಾಧ್ಯಕ್ಷರುಗಳು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.