ಕಾಪು : ಕ್ಷೇತ್ರದಲ್ಲಿ ವಿನಯಕುಮಾರ್ ಸೊರಕೆಯವರ ಅಭಿವೃದ್ಧಿ ಕಾರ್ಯಕ್ರಮಗಳ ಬಗೆಗೆ ಪ್ರಚಾರ ನಡೆಸುವ ಕಾಂಗ್ರೆಸ್ ಪ್ರಚಾರ ವಾಹನಕ್ಕೆ ಕಾಪು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕರು ವಿನಯ ಕುಮಾರ್ ಸೊರಕೆ ಉದ್ಯಾವರದಲ್ಲಿ ಚಾಲನೆ ನೀಡಿದರು.
ಈ ಪ್ರಚಾರ ವಾಹನ ಕಾಪು ಕ್ಷೇತ್ರದಾದ್ಯಂತ ಸಂಚರಿಸಿ ಪ್ರಚಾರ ನಡೆಸಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉದ್ಯಾವರ ನಾಗೇಶ್ ಕುಮಾರ್, ಗಿರೀಶ್ ಕುಮಾರ್, ರಾಯಸ್ ಫೆರ್ನಾಂಡೀಸ್, ಅಬೀದ್ ಅಲಿ, ಶೇಖರ ಕೋಟ್ಯಾನ್, ಸಾಯಿನಾಥ್, ನಿತೀನ್ ಸಾಲ್ಯಾನ್, ಸೊಹೇಲ್ ರಹಮತುಲ್ಲಾ, ಭಾಸ್ಕರ ಕೋಟ್ಯಾನ್, ಸಚಿನ್, ರಿಯಾಝ್ ಪಳ್ಳಿ, ಮೇರಿ ಡಿಸೋಜ, ಪೂರ್ಣಿಮಾ, ಆಶಾ, ಹೆಲೆನ್ ಫೆರ್ನಾಂಡೀಸ್, ದಿವಾಕರ ಬೊಳ್ಜೆ, ಸರೋಜ, ಗಿರೀಶ್ ಗುಡ್ಡೆಯಂಗಡಿ, ಮೀರಾ, ದಯಾನಂದ, ನಯಾಝ್ ಪಳ್ಳಿ, ಅನ್ಸರ್, ಆಶಾ ಸುರೇಶ್, ಸತೀಶ್ ಉಪಸ್ಥಿತರಿದ್ದರು.