ಕಾಪು : ಇಲ್ಲಿನ ಪೇಟೆ ವಾರ್ಡ್ ನಂಬರ್ 135 ರಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರ ಬಿರುಸಿನ ಮತಯಾಚನೆ ಪಕ್ಷದ ಕಾರ್ಯಕರ್ತರಿಂದ ನಡೆಯಿತು.
ಈ ಸಂದರ್ಭ ಮಾತನಾಡಿದ ಕಾಪು ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹರೀಶ್ ನಾಯಕ್, ಕಾಪು ಕ್ಷೇತ್ರದಲ್ಲಿ ವಿನಯ್ ಕುಮಾರ್ ಸೊರಕೆಯವರಿಗೆ ಎಲ್ಲಾ ಸಮಾಜದವರಿಂದಲೂ ಉತ್ತಮ ಸ್ಪಂದನೆಯನ್ನು ದೊರೆಯುತ್ತಿದ್ದು, ಈ ಬಾರಿ ಖಂಡಿತವಾಗಿಯೂ ಕಾಪುವಿನಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ. ಅಲ್ಲದೆ ಪ್ರತಿ ಮನೆಗೂ ಪ್ರತಿ ತಿಂಗಳು ಗೃಹ ಜ್ಯೋತಿ ಕಾರ್ಯಕ್ರಮದ ಅಡಿಯಲ್ಲಿ 200 ಯುನಿಟ್ ಉಚಿತ ವಿದ್ಯುತ್ ಹಾಗೂ ಪ್ರತೀ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ಮನೆ ನಿರ್ವಹಣೆಗೆ ರೂ. 2,000 ಹಾಗೂ ವಿವಿಧ ಯೋಜನೆಗಳ ಕಾಂಗ್ರೆಸ್ ಗ್ಯಾರಂಟಿಗೆ ಮತದಾರರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು.
ಈ ಸಂದರ್ಭ ಪಕ್ಷದ ಪ್ರಮುಖರಾದ ಹರೀಶ್ ನಾಯಕ್ ಕಾಪು, ದೀಪಕ್ ಕುಮಾರ್ ಎರ್ಮಾಳ್, ಮಾಧವ ಪಾಲನ್, ಆಶಾ ಕಟಪಾಡಿ, ಫರ್ಝಾನ, ಆಶಾ ಶಂಕರ್, ಶೋಭ ಪಾಂಗಳ, ಪ್ರಭಾಕರ್, ಶಂಕರ್ ಕಾಪು, ಕಾರ್ಯಕರ್ತರು ಉಪಸ್ಥಿತಿಯಿದ್ದರು.