ಕಟಪಾಡಿ : ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಇಂದು ಬಿಜೆಪಿ ಅಭ್ಯರ್ಥಿ ಮತ ಪ್ರಚಾರದ ಅಂಗವಾಗಿ ಮಧ್ಯಾಹ್ನ 2ಕ್ಕೆ ಉಡುಪಿಯಿಂದ ನೇರವಾಗಿ ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನದಲ್ಲಿ ಜರಗುವ ಬಹಿರಂಗ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಮಿತ್ ಶಾ ಬರುವಿಕೆಯ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ.