ಕಾಪು : ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಾಪು ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ನಮ್ಮ ಕನಸಿನ ಕಾಪು ಪ್ರಣಾಳಿಕೆಯ ಮೂಲಕ ಸುಂದರ ಕಾಪು ಸ್ವಚ್ಛ ಕಾಪು ಪರಿಕಲ್ಪನೆಯಲ್ಲಿ ಕಾಪು ಕ್ಷೇತ್ರದ ನಾಗರಿಕರಿಗೆ ಎಲ್ಲಾ ಸೌಲಭ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಇಂದು ಕಾಪು ರಾಜೀವ ಭವನದಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದರು.
ಈ ಸಂದರ್ಭ ಮಾತನಾಡಿದ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ,
ಹೆಜಮಾಡಿಯಿಂದ ಕುಕ್ಕೆಹಳ್ಳಿಯವರೆಗೆ ಈ ಯೋಜನೆ ಜಾರಿಗೊಳಿಸಲಿದ್ದೇವೆ. ಬಡವರು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಬಾಕಿ ಇದೆ ಹಾಗಾಗಿ ಮನೆರಹಿತರಿಗೆ ಮನೆ ನಿರ್ಮಾಣ, ವಿಜ್ಞಾನ ಕೇಂದ್ರ , ಸರಕಾರಿ ಇಂಜಿನಿಯರಿಂಗ್ ಕಾಲೇಜ್, ಜೊತೆಗೆ ಜಿಲ್ಲಾ ಮಟ್ಟದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯ ಗುರಿ,
ಪ್ರವಾಸೋದ್ಯಮಕ್ಕೂ ಒತ್ತು ನೀಡಲಿದ್ದೇವೆ.
ಮನೆ ಮನೆಗೆ ಶುದ್ಧ ಕುಡಿಯುವ ನೀರಿಗಾಗಿ ಶುದ್ಧ ಗಂಗಾ ಯೋಜನೆ, ಕೌಶಲ್ಯಾಭಿವೃದ್ಧಿ ಕೇಂದ್ರ,
ಯುವಕರಿಗೆ ಉದ್ಯೋಗ ಮತ್ತು ಉದ್ದಿಮೆ, ಅತ್ಯಾಧುನಿಕ ತಂತ್ರಜ್ಞಾನದ ಕಸವಿಲೇವಾರಿ ಘಟಕ ಸ್ಥಾಪನೆ, ಬಹುಮಹಡಿ ವಸತಿ ಯೋಜನೆ,
ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ , ಆರೋಗ್ಯಕ್ಕೆ ಒತ್ತು ನೀಡುವ ದಿಸೆಯಲ್ಲಿ ಕಾಪು ಪುರಸಭಾ ವ್ಯಾಪ್ತಿಯಲ್ಲಿ 100 ಬೆಡ್ ಆಸ್ಪತ್ರೆ ನಿರ್ಮಾಣ, ಈಜುಕೊಳ ನಿರ್ಮಾಣ, ರೈತ ಸಂಜೀವಿನಿ ಯೋಜನೆ, ಸಮುದಾಯ ಭವನಗಳ ನಿರ್ಮಾಣ,
ಸರ್ವ ಧರ್ಮದ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ, ದಲಿತ ಶ್ರೇಯಾಭಿವೃದ್ಧಿ ಯೋಜನೆ, ಸಿ ಆರ್ ಝಡ್ ನಿಯಮ ಸಡಿಲಿಕೆ, ಸುಸಜ್ಜಿತ ಬಸ್ಸು ತಂಗುದಾಣ ಇತ್ಯಾದಿ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.
ಈ ಸಂದರ್ಭ ಕಾಪು ಬ್ಲಾಕ್ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ಕಾಂಗ್ರೆಸ್ ಮುಖಂಡರಾದ
ದೇವಿಪ್ರಸಾದ್ ಶೆಟ್ಟಿ, ಮಾಧವ ಪಾಲನ್, ಶರ್ಫುದ್ಧೀನ್ ಮತ್ತಿತರರು ಉಪಸ್ಥಿತರಿದ್ದರು.