ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಉಪಕಾರ ಮಾತ್ರ ಆಗುವುದು, ಅಪಕಾರವಾಗದು - ಪ್ರಮೋದ್ ಮಧ್ವರಾಜ್

Posted On: 30-04-2023 05:31PM

ಕಾಪು : ಬಿಜೆಪಿಯಲ್ಲಿ ಸಂಸ್ಕಾರ ಗುಣವಿದೆ. ಹಾಗಾಗಿ ಬಂಡಾಯವೆನ್ನುವುದು ಕಡಿಮೆ. ಶಾಸಕ ಲಾಲಾಜಿಯವರ ಸಾಧುತನ ಗುಣವೇ ಅವರಿಗೆ ಭೂಷಣ. ಅವರ ಅವಧಿಯ ಕೆಲಸ ಕಾರ್ಯಗಳು ಶ್ಲಾಘನೀಯ. ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಉಪಕಾರ ಮಾತ್ರ ಆಗುವುದು. ಅಪಕಾರವಾಗದು. ಎಲ್ಲರನ್ನು ಸಮಾನವಾಗಿ ನೋಡುವ ವ್ಯಕ್ತಿ ಎಂದು ಬಿಜೆಪಿ ಪಕ್ಷದ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಭಾನುವಾರ ಕಾಪುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮೀನುಗಾರರ ಹಿತ ಕಾಪಾಡುವ ಪಕ್ಷ ಬಿಜೆಪಿಯಾಗಿದೆ ಎಂದರು. ಬಿಜೆಪಿ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.

ಬಿಜೆಪಿ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಎಲ್ಲಾ ಕಡೆ ಬಿಜೆಪಿಗೆ ಪೂರಕ ವಾತಾವರಣವಿದೆ. ಈ ಬಾರಿ ಬಹುಮತದಿಂದ ಕ್ಷೇತ್ರದ ನಾಗರಿಕರು ಗೆಲ್ಲಿಸುವರೆಂಬ ನಿರೀಕ್ಷೆಯಿದೆ ಎಂದರು.

ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ ಬಿಜೆಪಿ ಅಭ್ಯರ್ಥಿ ಪರ ಪಕ್ಷದ ಕಾರ್ಯಕರ್ತರಿಂದ ಬಿರುಸಿನ ಪ್ರಚಾರ ನಡೆಯುತ್ತಿದೆ. ಬಿಜೆಪಿ ಸರಕಾರದ ಕಾರ್ಯ ವೈಖರಿಯ ಜೊತೆಗೆ ಗುರ್ಮೆ ಸುರೇಶ್ ಶೆಟ್ಟಿಯವರ ಸಮಾಜಸೇವೆಯೂ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭ ಪಕ್ಷದ ಪ್ರಮುಖರಾದ ಶ್ರೀಕಾಂತ್ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಆಳ್ವ, ಗೋಪಾಲಕೃಷ್ಣ ‌ರಾವ್, ಶರಣ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು.