ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಪಕ್ಷದ ಕಾರ್ಯಕರ್ತರೊಂದಿಗೆ ಮನ್ ಕಿ ಬಾತ್ ವೀಕ್ಷಿಸಿದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ

Posted On: 30-04-2023 05:49PM

ಕಾಪು : ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಕಾಪು ವಿಧಾನಸಭಾ ಕ್ಷೇತ್ರ 80 ಬಡಗಬೆಟ್ಟು ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 36ರ ಬೂತ್ ಅಧ್ಯಕ್ಷರಾದ ಸಂದೀಪ್ ಮರಾಠೆ ಅವರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕರ್ತರೊಂದಿಗೆ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ವ್ಯಾಪ್ತಿಯ ಪಕ್ಷದ ಪ್ರಮುಖರು, ಗ್ರಾಮ ಪಂಚಾಯತ್ ಸದಸ್ಯರು, ಉಪಸ್ಥಿತರಿದ್ದರು‌.