ಕಾಪು ಕ್ಷೇತ್ರದಲ್ಲಿ ಸುಸಜ್ಜಿತ ಗೋ ರುದ್ರಭೂಮಿ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ
Posted On:
05-05-2023 01:32PM
ಕಾಪು: ತಾವು ಚುನಾಯಿತರಾದರೆ ಕಾಪು ಕ್ಷೇತ್ರದಲ್ಲಿ ಸುಸಜ್ಜಿತ ಗೋ ರುದ್ರಭೂಮಿ ಸ್ಥಾಪಿಸುವುದಾಗಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತದಾರರಿಗೆ ಭರವಸೆ ನೀಡಿದ್ದಾರೆ.
ಗೋ ಪ್ರೇಮಿ ಆಗಿರುವ ಗುರ್ಮೆ ಈಗಾಗಲೇ ಗೋ ವಿಹಾರಧಾಮ ಸ್ಥಾಪಿಸಿ ನೂರಾರು ಗೋವುಗಳನ್ನು ಸಾಕುತ್ತಿದ್ದಾರೆ. ಅವರೀಗ ತಮ್ಮ ಪ್ರಣಾಳಿಕೆಯಲ್ಲಿ ಗೋವುಗಳಿಗೆ ಗೌರವಯುತ ಅಂತ್ಯಸಂಸ್ಕಾರಕ್ಕಾಗಿ ಸುಸಜ್ಜಿತ ರುದ್ರಭೂಮಿ ನಿರ್ಮಾಣ ಮಾಡುವುದಾಗಿ ವಚನ ನೀಡಿದ್ದಾರೆ.
ಇದಕ್ಕೆ ತಮಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಪ್ರೇರಣೆ ಎಂದು ಹೇಳಿರುವ ಅವರು ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ನೀಡಲಾಗಿರುವ ಉನ್ನತ ಮತ್ತು ಪೂಜ್ಯ ಸ್ಥಾನಮಾನವನ್ನು ಅನುಸರಿಸಿ ತಾವು ಈ ಕಾರ್ಯಕ್ಕೆ ಮುಂದಾಗಿರುವುದಾಗಿ ಹೇಳಿದ್ದಾರೆ.