ಕಾಪು : ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರು ಇಂದು ಕಾಪು ಪುರಸಭೆ ವ್ಯಾಪ್ತಿಯ ಕಾಪು ಪೇಟೆಯಲ್ಲಿ ಭರ್ಜರಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಗೀತಾಂಜಲಿ ಸುವರ್ಣ, ಮಂಡಲ ಅಧ್ಯಕ್ಷ ನವೀನ್ ಎಸ್.ಕೆ, ಮಾಜಿ ಪುರಸಭೆ ಸದಸ್ಯ ವಿಜಯ್ ಕರ್ಕೇರ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯರು ರತ್ನಾಕರ ಶೆಟ್ಟಿ, ಹರಿಣಿ ದೇವಾಡಿಗ, ಪ್ರಕೋಷ್ಟ ಸಂಚಾಲಕ ಗೋಪ ಪೂಜಾರಿ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.