ಕಾಪು : ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಪಟ್ಟಾಭಿಷೇಕ ಮಹೋತ್ಸವದ 13ನೇ ವರ್ಷದ ವರ್ಧಂತ್ಯುತ್ಸವವು ಮೇ 14ರಂದು ಪಡುಕುತ್ಯಾರಿನಲ್ಲಿ ನಡೆಯಲಿದೆ.
ವರ್ಷಂಪ್ರತಿ ನಡೆಯುವ ಸಾಮೂಹಿಕ ಮಹಾ ಚಂಡಿಕಾಯಾಗವು ಅದೇ ದಿನ ನಡೆಯಲಿದೆ.
ಅಂದು ಬೆಳಿಗ್ಗೆ ಜಗದ್ಗುರುಗಳಿಂದ ಕಟಪಾಡಿ ಶ್ರೀಮಹಾಸಂಸ್ಥಾನದಲ್ಲಿ ಶ್ರೀಕರಾರ್ಚಿತ ದೇವತಾ ಪೂಜೆ ಬಳಿಕ ಕಟಪಾಡಿಯಲ್ಲಿರುವ ಅನಂತಶ್ರೀ ವಿಭೂಷಿತ ನಾಗಧರ್ಮೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವೃಂದಾವನದಲ್ಲಿ ಜಗದ್ಗುರುಗಳವರಿಂದ ಪೂಜೆ ನಡೆಯಲಿದೆ. ಬಳಿಕ ಪಡುಕುತ್ಯಾರಿನ ಶ್ರೀ ಸರಸ್ವತೀ ಯಾಗ ಶಾಲೆಯಲ್ಲಿ ಶ್ರೀ ವಿಶ್ವಕರ್ಮ ಯಜ್ಞ, ಶ್ರೀ ದಕ್ಷಿಣಾಮೂರ್ತಿ ಯಜ್ಞ, ಶ್ರೀ ರುದ್ರ ಯಜ್ಞ, ಸಾಮೂಹಿಕ ಶ್ರೀ ಚಂಡಿಕಾ ಯಾಗದ ಪೂರ್ಣಾಹುತಿ ನಡೆಯಲಿದೆ. ನಂತರ ಆನೆಗುಂದಿ ಪ್ರತಿಷ್ಠಾನದ ವತಿಯಿಂದ ಜಗದ್ಗುರುಗಳವರ ಪಾದಪೂಜೆಯ ಬಳಿಕ ಪಟ್ಟಾಭಿಷೇಕ ವರ್ಧಂತಿಯ ವಿಧಿ ವಿಧಾನಗಳ ನಡೆಯಲಿವೆ.
ಬಳಿಕ ಪಡುಕುತ್ಯಾರು ಮಹಾಸಂಸ್ಥಾನದ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ನಡೆಯುವ ಧರ್ಮ ಸಭೆಯ ಅಧ್ಯಕ್ಷತೆಯನ್ನು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ವಹಿಸಲಿದ್ದಾರೆ. ಇದೇ ವೇಳೆ ಮಹಾಸಂಸ್ಥಾನದ ವ್ಯಾಪ್ತಿಯಲ್ಲಿರುವ ಶ್ರೀಕಾಳಿಕಾಂಬಾ ದೇವಸ್ಥಾನದ ಧರ್ಮದರ್ಶಿಗಳು, ಸಮಾಜ ಸದಸ್ಯರಿಂದ ಸಂಗ್ರಹಿಸಿದ ಗುರುಕಾಣಿಕೆಯನ್ನು ವಾಡಿಕೆಯಂತೆ ಜಗದ್ಗುರುಗಳಿಗೆ ಫಲತಾಂಬೂಲಗಳೊಂದಿಗೆ ಸಮರ್ಪಿಸಿ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಗಳವರು ಆಶೀರ್ವಚನ ನೀಡಲಿದ್ದಾರೆ.
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಆಸ್ಥಾನ ವಿದ್ವಾಂಸರಾದ ವಿದ್ವಾನ್ ಮಹಾಮಹೋಪಾಧ್ಯಾಯ ಪಂಜ ಭಾಸ್ಕರ ಭಟ್, ಘನಪಾಠಿ ವಿದ್ವಾನ್ ಬಾಲಚಂದ್ರ ಭಟ್ ಚಂದುಕೂಡ್ಲು , ಅಂತರಾಷ್ಟ್ರೀಯ ಜ್ಯೋತಿಷ್ಯ ವಿದ್ವಾನ್ ಉಮೇಶ್ ಆಚಾರ್ಯ ಪಡೀಲು ಗೌರವ ಉಪಸ್ಥಿತಿಯಲ್ಲಿ ನಡೆಯುವ ಧರ್ಮಸಭೆಯಲ್ಲಿ ವಿದ್ವಾನ್ ವೇ.ಬ್ರ. ಶ್ರೀ ಶಂಕರ ಆಚಾರ್ಯ ಕಡ್ಲಾಸ್ಕರ್ (ಪಂಡಿತ್) ಹುಬ್ಬಳ್ಳಿ ಅವರಿಂದ ಗುರುಪೀಠಗಳು ಮತ್ತು ಯುವ ಜನತೆ ಎಂಬ ವಿಷಯದಲ್ಲಿ ಉಪನ್ಯಾಸ ನಡೆಯಲಿದೆ.
ಆನೆಗುಂದಿ ಮೂಲ ಮಠ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಂಚಸಿಂಹಾಸನ ವಿಕಾಸ ಸಮಿತಿ ಮತ್ತು ಆನೆಗುಂದಿ ಶಾಖಾ ಮಠ ಸಮಿತಿ ಬೆಂಗಳೂರು ಅಧ್ಯಕ್ಷ ಹರಿಶ್ಚಂದ್ರ ಎನ್. ಆಚಾರ್ಯ ಬೆಂಗಳೂರು, ಕರಾವಳಿ, ಬೆಂಗಳೂರು, ಹುಬ್ಬಳ್ಳಿ, ಮುಂಬೈ ಕಾಳಿಕಾಂಬಾ ದೇವಾಲಯಗಳ ಧರ್ಮದರ್ಶಿಗಳಾದ ಕೆ. ಕೇಶವ ಆಚಾರ್ಯ ಮಂಗಳೂರು, ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ಗಜಾನನ ಎನ್. ಆಚಾರ್ಯ ಭಟ್ಕಳ , ಪುರೋಹಿತ್ ಜಯಕರ ಆಚಾರ್ಯ ಮೂಡಬಿದ್ರೆ, ನವೀನ ಆಚಾರ್ಯ ಕಟಪಾಡಿ, ಮಧುಕರ ಚಂದ್ರಶೇಖರ ಆಚಾರ್ಯ ಗೋಕರ್ಣ, ಶೇಖರ ಆಚಾರ್ಯ ಕಾಪು , ಕೆ. ಸುಧಾಕರ ಆಚಾರ್ಯ ಕೊಲಕಾಡಿ, ಸುಂದರ ಆಚಾರ್ಯ ಕೋಟೆಕಾರು , ಶ್ರೀ ಬಿ.ಎಂ.ಯದುನಂದನ ಆಚಾರ್ಯ ಬಂಗ್ರಮಂಜೇಶ್ವರ, ಜನಾರ್ದನ ಆಚಾರ್ಯ ಆರಿಕ್ಕಾಡಿ, ಕೆ. ಪ್ರಭಾಕರ ಆಚಾರ್ಯ ಮಧೂರು, ಪುರುಷೋತ್ತಮ ಆಚಾರ್ಯ ಕಾಞಂಗಾಡು, ಸಿ.ಎ ಶ್ರೀಧರ ಆಚಾರ್ಯ ಪನ್ವೇಲ್ ಮುಂಬಯಿ, ಚಿಕ್ಕಣ್ಣ ಆಚಾರ್ ನಾಯಂಡರಹಳ್ಳಿ ಬೆಂಗಳೂರು, ಮನೋಹರ ಲಕ್ಕುಂಡಿ ಹುಬ್ಬಳ್ಳಿ, ಬಿ. ಜಗದೀಶ್ ಆಚಾರ್ಯ ಪಡುಪಣಂಬೂರು , ಮಹಾಸಂಸ್ಥಾನದ ವಿವಿಧ ಸಮಿತಿಗಳ ಪ್ರಮುಖರಾದ ಬಿ.ಸೂರ್ಯಕುಮಾರ್ ಆಚಾರ್ಯ ಹಳೆಯಂಗಡಿ, ಮೋಹನ್ ಕುಮಾರ್ ಬೆಳ್ಳೂರು, ಸುಂದರ ಆಚಾರ್ಯ ಬೆಳುವಾಯಿ, ಗಣೇಶ್ ಆಚಾರ್ಯ ಕೆಮ್ಮಣ್ಣು, ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಪಿ.ವಿ ಗಂಗಾಧರ ಆಚಾರ್ಯ ಉಡುಪಿ, ಪ್ರವೀಣ ಆಚಾರ್ಯ ರಂಗನಕೆರೆ, ವೈ. ಧರ್ಮೇಂದ್ರ ಆಚಾರ್ಯ ನಿವೃತ್ತ ಸುಬೇದಾರ್ ಕಾಸರಗೋಡು, ಕೃಷ್ಣ ವಿ. ಆಚಾರ್ಯ, ಮುಂಬಯಿ, ಜಿ.ಟಿ ಆಚಾರ್ಯ ಮುಂಬಯಿ, ಶುಭಕರ ಎನ್. ಆಚಾರ್ಯ, ಕೊಯಂಬತ್ತೂರು, ಮೋಹನ್ ಕುಮಾರ್ ಬೊಳ್ಳೂರು, ವಿವಿಧ ಪ್ರಮುಖ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಮಧು ಆಚಾರ್ಯ ಮೂಲ್ಕಿ, ಸದಾನಂದ ಎಸ್. ಆಚಾರ್ಯ ಕಲ್ಯಾಣ ಪುರ, ತುಕಾರಾಮ ಆಚಾರ್ಯ ಬೆಂಗಳೂರು, ನಲ್ಕ ತ್ರಿವಿಕ್ರಮ ಆಚಾರ್ಯ ಬೆಂಗಳೂರು, ಯು.ಎಸ್.ಗಿರೀಶ್ ಆಚಾರ್ಯ ಕೊಯಂಬುತ್ತೂರು, ಯೋಗೀಶ್ ಆಚಾರ್ಯ ಕೊಯಂಬತ್ತೂರು ಇವರ ಉಪಸ್ಥಿತಿಯಲ್ಲಿ ಸಮಾರಂಭ ಸಂಪನ್ನಗೊಳ್ಳಲಿದೆ. ಇದೇ ದಿನ ವಸಂತ ವೇದ ಶಿಬಿರದ ಸಮಾರೋಪವೂ ನಡೆಯಲಿದೆ.
2023ನೇ ಸಾಲಿನ ಪ್ರಶಸ್ತಿ ಪ್ರದಾನ : ಈ
ಸಮಾರಂಭದಲ್ಲಿ ಮಹಾಸಂಸ್ಥಾನದಿಂದ ವರ್ಷಂಪ್ರತಿ ನೀಡಲಾಗುವ ಪ್ರಶಸ್ತಿಗಳನ್ನು ಜಗದ್ಗುರುಗಳವರು ಪ್ರದಾನ ಮಾಡಲಿದ್ದಾರೆ. ಮಹಾಸಂಸ್ಥಾನದ ಪುನರುತ್ಥಾನಕ್ಕಾಗಿ ಸೇವೆ ಸಲ್ಲಿಸುತ್ತಿರುವರಿಗೆ ಶ್ರೀ ಸರಸ್ವತೀ ಅನುಗ್ರಹ ಪ್ರಶಸ್ತಿ ಹಾಗೂ ವೈದಿಕ, ಕಲೆ ಶಿಲ್ಪ ಉದ್ಯಮ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಿರಿಯ ಮತ್ತು ಕ್ರೀಯಾಶೀಲರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಆನೆಗುಂದಿಶ್ರೀ ಪ್ರಶಸ್ತಿ ಪ್ರದಾನ ನಡೆಯಲಿದೆ. ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು ಇವರಿಗೆ ಶ್ರೀ ಸರಸ್ವತೀ ಅನುಗ್ರಹ ಪ್ರಶಸ್ತಿ, ಬ್ರಹ್ಮಶ್ರೀ ಸೀತಾರಾಮ ಶಾಸ್ತ್ರಿ ಮಂಗಳೂರು (ವೈದಿಕ), ಮಂಟಪ ಕೇಶವ ಆಚಾರ್ಯ ಸಾಲಿಗ್ರಾಮ, ಮಂಜುನಾಥ ಆಚಾರ್ಯ ಚಿತ್ರಪಾಡಿ , ವ್ಯಾಸರಾಯ ಆಚಾರ್ಯ ಪಾದೂರು, ದಿವಾಕರ ಆಚಾರ್ಯ ಕೋಟೆಕಾರು(ಶಿಲ್ಪ), ವಿಘ್ನೇಶ್ವರ ಭಟ್ ಪುತ್ತೂರು (ಜ್ಯೋತಿಷ್ಯ), ಡಾ. ಸಿ.ಆರ್. ಚಂದ್ರ ಶೇಖರ್ ಬೆಂಗಳೂರು( ವೈದ್ಯಕೀಯ), ನೇಜಾರು ವಿಶ್ವನಾಥ ರಾವ್ ಕತಾರ್, ಬಿ. ವಿಶ್ವನಾಥ ರಾವ್ ಕೊಯಂಬುತ್ತೂರು( ಮರಣೋತ್ತರ) ( ಉದ್ಯಮ) ಎಂಬಿವರು ಆನೆಗುಂದಿಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಜಯ ಕುಮಾರ್ ಕುಂಟಾಡಿ ಕೆ.ಎ.ಎಸ್ , ಬ್ರಹ್ಮಾವರ ಡಾ. ಗೋಪಾಲಕೃಷ್ಣ ನವದೆಹಲಿ ಇವರಿಗೆ ವಿಶೇಷ ಗೌರವಾಭಿನಂದನೆ ನಡೆಯಲಿದೆ.
ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ : 2021, 2022, 2023 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್. ಎಲ್. ಸಿ, ಪಿ.ಯು.ಸಿ/ಪ್ಲಸ್ ಟು ಪರೀಕ್ಷೆಗಳಲ್ಲಿ 95% ಮತ್ತು ಅಧಿಕ ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಪದವಿ, ಸ್ನಾತಕೋತ್ತರ,ವೃತ್ತಿ ಶಿಕ್ಷಣ, ಮೆಡಿಕಲ್, ಇಂಜಿನಿಯರಿಂಗ್ ಪರೀಕ್ಷೆಗಳಲ್ಲಿ ರೇಂಕ್ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಜಗದ್ಗುರುಗಳವರಿಂದ ಅಭಿನಂದನೆ ನಡೆಯಲಿದೆ.
ಪಟ್ಟಾಭಿಷೇಕ ಮಹೋತ್ಸವದ ವರ್ಧಂತಿಯ ಪುಣ್ಯ ಸಮಾರಂಭದಲ್ಲಿ ಸಮಸ್ತ ಸಮಾಜ ಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಗದ್ಗುರಗಳವರ ಕೃಪಾ ಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಆನೆಗಂದಿ ಪ್ರತಿಷ್ಠಾನ, ಮಠದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು
ಪ್ರಕಟನೆಯಲ್ಲಿ ತಿಳಿಸಿದ್ದಾರೆ.