ಕಾಪು : ತಾಲೂಕಿನ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಪಟ್ಟಾಭಿಷೇಕ ಮಹೋತ್ಸವದ 13ನೇ ವರ್ಷದ ವರ್ಧಂತ್ಯುತ್ಸವವು ಮೇ 14ರಂದು ಪಡುಕುತ್ಯಾರಿನಲ್ಲಿ ನಡೆಯಲಿದೆ.
ಇದೇ ದಿನ 2021, 2022, 2023 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್. ಎಲ್. ಸಿ, ಪಿ.ಯು.ಸಿ/ಪ್ಲಸ್ ಟು ಪರೀಕ್ಷೆಗಳಲ್ಲಿ 95% ಮತ್ತು ಅಧಿಕ ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಪದವಿ, ಸ್ನಾತಕೋತ್ತರ, ವೃತ್ತಿ ಶಿಕ್ಷಣ, ಮೆಡಿಕಲ್, ಇಂಜಿನಿಯರಿಂಗ್ ಪರೀಕ್ಷೆಗಳಲ್ಲಿ
ರ‌್ಯಾಂಕ್ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಜಗದ್ಗುರುಗಳವರಿಂದ ಅಭಿನಂದನೆ ನಡೆಯಲಿದೆ.
ಅರ್ಹ ವಿಶ್ವಬ್ರಾಹ್ಮಣ ಸಮಾಜ ಬಾಂಧವರ ವಿದ್ಯಾರ್ಥಿಗಳು ಅಂಕಗಳನ್ನು ವಿವರಿಸುವ ಧೃಡೀಕೃತ ಪ್ರಮಾಣ ಪತ್ರದ ಪ್ರತಿಯೊಂದಿಗೆ ಅಂದು ಬೆಳಗ್ಗೆ 10ಗಂಟೆಗೆ ಪಡುಕುತ್ಯಾರು ಮಹಾಸಂಸ್ಥಾನದ ಕಚೇರಿಯಲ್ಲಿ ಹೆಸರು ನೋಂದಾಯಿಸಬೇಕಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಆನೆಗುಂದಿ ಪ್ರತಿಷ್ಠಾನದ ವಿಶ್ವಸ್ಥರೂ, ಈ ವಿಭಾಗ ಮುಖ್ಯಸ್ಥರೂ ಆಗಿರುವ ಶ್ರೀಧರ ಜೆ.ಆಚಾರ್ಯ ಕಟಪಾಡಿ ಮೋ.9483977159 ಅವರನ್ನು ಸಂಪರ್ಕಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.